Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಚೀನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ


ಬಳ್ಳಾರಿ,ಆ.15



ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲುಪ್ರಾಚೀನವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲುಪ್ರಾಚೀನವಸ್ತು ಸಂಗ್ರಹಾಲಯದಲ್ಲಿ ಹಲವಾರು ಪುರಾತನ ಪಳೆಯುಳಿಕೆಗಳನ್ನು ಸಂಗ್ರಹಿಸಲಾಗಿದ್ದು, ಆಕರ್ಷಣೀಯ ವಸ್ತು ಸಂಗ್ರಹಾಲಯಗಳಲ್ಲಿ ಒಂದಾಗಿದೆ. ಹಲವಾರು ವಸ್ತುವಿಷಯಗಳನ್ನು ಒಳಗೊಂಡಿದ್ದು, ವಸ್ತುಸಂಗ್ರಹಾಲಯದ ನಿರ್ವಹಣೆಯು ಅಚ್ಚುಕಟ್ಟಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.


ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಪ್ರಾಚೀನ ಶಿಲಾಯುಗ ಮತ್ತು ನವಶಿಲಾಯುಗಗಳಿಗೆ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತುಸಂಗ್ರಹಾಲಯವು ಶಿಲಾಯುಗದ ಉಪಕರಣಗಳ ವಿಶಿಷ್ಟವಾದ ಇತಿಹಾಸ ಪೂರ್ವ ಮಾಹಿತಿ ಒಳಗೊಂಡಿದೆ. ಶಿಲಾಯುಗದ ಮೇಲೆ ಕೇಂದ್ರೀಕೃತವಾಗಿರುವ ಏಕೈಕ ವಸ್ತು ಸಂಗ್ರಹಾಲಯವು ಇದಾಗಿದೆ ಎಂದು ತಿಳಿಸಿದರು.

*ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ವಿಶೇಷ:*

ದೇಶದಲ್ಲಿಯೇ ಪ್ರಾಗೈತಿಹಾಸಕ್ಕಾಗಿ ಮೀಸಲಿಟ್ಟ ಏಕೈಕ ವಸ್ತು ಸಂಗ್ರಹಾಲಯವಾಗಿದೆ. ಪ್ರಪಂಚದ ವಿವಿಧ ದೇಶಗಳಲ್ಲಿ ವಿವಿಧ ಕಾಲಗಟ್ಟಗಳಲ್ಲಿ ದೊರೆತ ತಲೆಬುರುಡೆಗಳು ಮಾದರಿಗಳಿವೆ ಹಾಗೂ ಆಫ್ರಿಕಾದಲ್ಲಿ ಸಿಕ್ಕಂತಹ ಶಿಲಾ ಉಪಕರಣಗಳ ಮಾದರಿಗಳು ಇವೆ.

ಈ ವೇಳೆ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ತಹಶೀಲ್ದಾರ ಗುರುರಾಜ, ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ಸದಸ್ಯ ಸಂತೋಷ್ ಮಾರ್ಟಿನ್, ಅಹಿರಾಜ್, ತಾಂತ್ರಿಕ ಸಹಾಯಕರಾದ ಗೌರಿ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ