Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ

ಬಳ್ಳಾರಿ,ಆ.12
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಮಂಗಳವಾರದ ಅಂತ್ಯಕ್ಕೆ ಒಟ್ಟು ಮತದಾರರ ನಮೂನೆಗಳ ಪೈಕಿ ಶೇ. 81.83 ರಷ್ಟು ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
*ಎಸ್‌ಐಆರ್ ಅವಧಿ:*
ಒಟ್ಟು ಮತದಾರರ ಸಂಖ್ಯೆ: 12,29,586.
ಮನೆ-ಮನೆ ಸಮೀಕ್ಷೆ ಹಾಗೂ ಡಿಜಿಟಲೀಕರಣ ಅವಧಿ: ಜೂನ್ 30 ರಿಂದ ಆಗಸ್ಟ್ 17.
ಕರಡು ಮತದಾರರ ಪಟ್ಟಿ ಪ್ರಕಟಣೆ: ಆಗಸ್ಟ್ 24.
ಮತದಾರರ ನೋಂದಣಿ ಎಸ್‌ಐಆರ್ ನಮೂನೆ ವಿತರಣೆ: ಒಟ್ಟು 12,29,586 ನಮೂನೆಗಳನ್ನು (ಶೇ. 100) ಬಿಎಲ್‌ಒಗಳ ಮೂಲಕ ಸಂಪೂರ್ಣವಾಗಿ ವಿತರಿಸಲಾಗಿದೆ.
ಆನ್‌ಲೈನ್ ಸಲ್ಲಿಕೆ: ಒಟ್ಟು 4,606 ಮತದಾರರು ಸ್ವತಃ ಆನ್‌ಲೈನ್ ಮೂಲಕ ನಮೂನೆಗಳನ್ನು ಸಲ್ಲಿಸಿದ್ದಾರೆ.
*ಮತದಾರರ ವರ್ಗೀಕರಣ:*
ಸಮೀಕ್ಷೆಯ ವೇಳೆ ಒಟ್ಟು 2,23,418 ಮತದಾರರ ಮಾಹಿತಿ ಕೆಳಗಿನಂತೆ ಗುರುತಿಸಲ್ಪಟ್ಟಿದೆ.
ಶಾಶ್ವತವಾಗಿ ಸ್ಥಳಾಂತರಗೊAಡವರು: 1,01,897
ಗೈರುಹಾಜರಿ / ಲಭ್ಯವಿಲ್ಲದವರು: 50,172
ಮೃತಪಟ್ಟವರು: 41,126
ಈಗಾಗಲೇ ನೋಂದಾಯಿತರಾದವರು (ಪುನರಾವರ್ತಿತ): 21,249
ಇತರ ಕಾರಣಗಳು: 8,974
ಜಿಲ್ಲೆಯ 1,227 ಮತಗಟ್ಟೆಗಳ ವ್ಯಾಪ್ತಿಯ 12,29,586 ಮತದಾರರಿಗೆ ವಿತರಿಸಲಾದ ಎಸ್‌ಐಆರ್ ಗಣತಿ ನಮೂನೆಗಳಲ್ಲಿ ಈವರೆಗೆ 10,06,168 ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಆಗಸ್ಟ್ 17ರೊಳಗೆ ಉಳಿದ ಡಿಜಿಟಲೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಆಗಸ್ಟ್ 24 ರಂದು ಅಧಿಕೃತವಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ