Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಗಂಧ ಆಧಾರಿತ ಕೃಷಿ ಅರಣ್ಯ ವ್ಯವಸ್ಧೆ ಕಾರ್ಯಾಗಾರ


ಧಾರವಾಡ ಮಾರ್ಚ್ 03: ಧಾರವಾಡ ಸಂಶೋಧನಾ ವೃತ್ತ ವ್ಯಾಪ್ತಿಯಲ್ಲಿ ಬರುವ ಸಂಶೋಧನಾ ವಲಯ ಧಾರವಾಡದಲ್ಲಿ ಫೆಬ್ರವರಿ 25 ರಂದು ಗುಂಗರಗಟ್ಟಿ ಅರಣ್ಯ ಅಕಾಡೆಮಿಯ ಸಂಭಾಗಣದಲ್ಲಿ ಆಯೋಜಿಸಿದ್ದ Workshop on Sandalwood based Agroforestry Systems and Estimation of Heartwood Content ಎಂಬ ವಿಷಯದ ಮೇಲೆ ನಡೆದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.



ಕಾರ್ಯಾಗಾರವನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಬಿ.ಪಿ. ರವಿ, ಉದ್ಘಾಟಿಸಿದರು. ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶ್ ಕುಮಾರ್ ಡಿ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.



ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಜಂಟಿ ನಿರ್ದೇಶಕ ಮರಿಯಾ ಕ್ರಿಸ್ತು ರಾಜಾ ಡಿ, ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಸಂಶೋಧನೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಎನ್. ಹಪ್ಪಳದ ಅವರು ಸ್ವಾಗತಿಸಿದರು. ಸಂಶೋಧನೆ ವಲಯದ ವಲಯ ಅರಣ್ಯ ಅಧಿಕಾರಿ ಮಹಾಂತೇಶ ಪೆಟ್ಲೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು.



ಕಾರ್ಯಾಗಾರದಲ್ಲಿ ಬೆಂಗಳೂರು ಮೂಲದ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲ ರೈತ ಮತ್ತು ಇಲಾಖೆಯ ಮುಂಚೂಣಿ ಸಿಬ್ಬಂದಿಯೊಂದಿಗೆ ಶ್ರೀಗಂಧದ ಆಧರಿತ ಕೃಷಿ ಅರಣ್ಯ ವ್ಯವಸ್ಥೆಗಳು ಮತ್ತು ಇದರ ಹಾರ್ಟವುಡ್ ಕುರಿತ ಅಂದಾಜಿಸುವಿಕೆಯ ಬಗ್ಗೆ ಅಮೂಲ್ಯ ಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ತಿಳಿಸಿದರು.



ಕಾರ್ಯಾಗಾರದಲ್ಲಿ ಹಿರಿಯ ಅಧಿಕಾರಿಗಳು, ಸಂಶೋಧನಾ ವೃತ್ತದ ಸಿಬ್ಬಂದಿ ಮತ್ತು ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳ ರೈತರು ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು