Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳ ತಾಯಿ - ಮಹಾಲಿಂಗ ಪ್ರಭು ಶ್ರೀ

ಕನಕಪುರ: ಶ್ರೀ ದೇಗುಲಮಠದ ನಿರ್ವಾಣಸ್ವಾಮಿ ಕೃಪಾ ವಿದ್ಯಾಪೀಠದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ನಿರ್ವಾಣಸ್ವಾಮಿ ಸಂಸ್ಕೃತ ಪಾಠಶಾಲೆ ಮತ್ತು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹಕಾರದೊಂದಿಗೆ "ಅಸ್ಮಾಕಂ ಸಂಸ್ಕೃತ ಭಾಷಾ" ಸಂಸ್ಕೃತೋತ್ಸವ ಕಾರ್ಯಕ್ರಮ ಮತ್ತು ಜನ ಜಾಗೃತಿ ಜಾತಕ್ಕೆ ಸಂಸ್ಥೆಯ ವಿಶೇಷ ಅಧಿಕಾರಿ ಶ್ರೀ ರವಿಶಂಕರ್‌ರವರು ಚಾಲನೆ ನೀಡಿದ ನಂತರ ಬೂದೀಕೆರೆ ರಸ್ತೆ ಎಂಜಿ ರಸ್ತೆಗಳಲ್ಲಿ ಜನ ಜಾಗೃತಿಯ ಜಾತ ನಡೆಯಿತು ನಂತರ ಅಸ್ಮಾಕಂ ಸಂಸ್ಕೃತ ಸಮಾರಂಭದ ದಿವ್ಯ ಸಾನಿಧ್ಯವನ್ನು ಮುಖ್ಯ ಶಿಕ್ಷಕರಾದ ವಿದ್ವಾನ್ ಮಹಾಲಿಂಗಪ್ರಭು ಸ್ವಾಮಿಗಳು, ವಹಿಸಿ ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳಿಗೆ ತಾಯಿ, ನಮ್ಮ ಪರಂಪರೆಯಲ್ಲಿ ಪೂಜೆ ಪುನಸ್ಕಾರಗಳಲ್ಲಿ ಬಳಸುವಂತಹ ಭಾಷೆ ಸಂಸ್ಕೃತ ಅದನ್ನು ಸರಳಗೊಳಿಸಿ ಜನಸಾಮಾನ್ಯರು ಮಾತನಾಡುವಂತೆ ಆಗಬೇಕು ಎಂಬುದು ಜಾತ ಮತ್ತು ಜಾಗೃತಿ ಕಾರ್ಯಕ್ರಮದ ಉದ್ದೇಶ ನಮ್ಮ ಶ್ರೀಮಠದಲ್ಲಿ ಇಮ್ಮಡಿ ಮಹಾಲಿಂಗ ಸ್ವಾಮಿಗಳವರ ಕಾಲದಿಂದಲೂ ಎಲ್ಲಾ ಜನಾಂಗದವರು ಸಂಸ್ಕೃತವನ್ನು ಕಲಿತು ಇಂದು ಪ್ರಮುಖ ಸ್ಥಳಗಳಲ್ಲಿ ಶಿಕ್ಷಕರಾಗಿ ಪುರೋಹಿತರಾಗಿ ಸಂಸ್ಕಾರವಂತವರಾಗಿ ಎಲ್ಲಾ ಕಡೆ ಕಾಣುತ್ತಿರುವುದು ನಮ್ಮ ಶ್ರೀಮಠದ ಹೆಮ್ಮೆ ಎಂದರು

.

ರಾಮನಗರ ಜಿಲ್ಲಾ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೆ ಪಿ ಯೋಗಿಶ್‌ರವರು ಉದ್ಘಾಟನೆಯನ್ನು ನೆರವೇರಿಸಿ ಸಂಸ್ಕೃತ ಭಾಷೆಯು ಇಂದಿನ ವಿದ್ಯಾರ್ಥಿಗಳು ಅಧ್ಯಯನ ಮಾಡಿದರೆ ಮನಸ್ಸು ಶುದ್ಧವಾಗಿ, ನರ್ಮಲವಾಗಿ ಎಲ್ಲಾ ವಿಷಯಗಳಲ್ಲಿಯೂ ಆಸಕ್ತಿ ಮೂಡುತ್ತದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಶ್ರೀ ದುರದುಂಡೇಶ್ವರ ಸ್ವಾಮಿಗಳು, ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ಈ ಕಾರ್ಯಕ್ರಮ ಯಶಸ್ವಿ ಎಂದರು ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಆರ್. ಶಿವಯ್ಯನವರು ವಹಿಸಿದ್ದರು. ಉಪನ್ಯಾಸವನ್ನು ವಿದ್ಯಾನ್ ಶಿವಕುಮಾ‌ರ್ ಎಂ.ರವರು ನಡೆಸಿದರು ಸಮಾರಂಭದಲ್ಲಿ ವಿದ್ವಾನ್ ವೀರಭದ್ರಪ್ಪರವರು, ಮಂಜುನಾಥ ಮಲ್ಲಣ್ಣನವರು, ವಿದುಷಿ ವಿ ಎಲ್ ಧನಲಕ್ಷ್ಮಿರವರು, ಶ್ರೀ ಆನಂದ್ ಕುಮಾರ್‌ರವರು, ಸಂಸ್ಥೆಯ ಎಲ್ಲಾ ಶಿಕ್ಷಕರು ಮಕ್ಕಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು