Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಲ್ಲಾಡಳಿತ ಭವನದ ಕಟ್ಟಡ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಜನವರಿ ವೇಳೆಗೆ ನೂತನ ಜಿಲ್ಲಾಧಿಕಾರಿ ಕಚೇರಿ ಪ್ರಾರಂಭ



ಚಿತ್ರದುರ್ಗಜುಲೈ13:

ಮುಂಬರುವ ಜನವರಿ ವೇಳೆಗೆ ನೂತನ ಜಿಲ್ಲಾಧಿಕಾರಿ ಕಚೇರಿ ಲೋಕಾರ್ಪಣೆಗೊಂಡು ದೈನಂದಿನ ಕಾರ್ಯ ಚಟುವಟಿಕೆಗಳು ಪ್ರಾರಂಭವಾಗಲಿವೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕುಂಚಿಗನಾಳ್ ಕಣಿವೆ ಬಳಿ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಈ ಹಿಂದೆಯೇ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಿ ಕಾಮಗಾರಿ ಪ್ರಾರಂಭಿಸಲಾಗಿದೆ. ಇದನ್ನು ಅವೈಜ್ಞಾನಿಕ ಎನ್ನುವುದರಿಂದ ಈಗ ಏನು ಪ್ರಯೋಜನವಿಲ್ಲ. ಲೋಕೋಪಯೋಗಿ ಇಲಾಖೆ ಜಿಲ್ಲಾಡಳಿತ ಭವನದ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲಿದೆ. ಕಟ್ಟಡ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದ್ದು, ಚಿತ್ರದುರ್ಗ ಜನತೆಗೆ ನೂತನ ಕಚೇರಿ ದೊರಕಲಿದೆ ಎಂದರು.

ಆರಂಭದಲ್ಲಿ ರೂ.25 ಕೋಟಿ ವೆಚ್ಚದಲ್ಲಿ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಗುಡ್ಡವನ್ನು ಕಡಿದು ನಿರ್ಮಾಣ ಕಟ್ಟಡ ಕಾಮಗಾರಿ ಮಾಡಬೇಕಾದ್ದರಿಂದ ಹಣ ಸಾಲುವುದಿಲ್ಲ ಎಂದು ಯೋಜನೆಯನ್ನು ರೂ.47 ಕೋಟಿಗೆ ಪರಿಷ್ಕರಿಸಲಾಗಿದೆ. ಅಗತ್ಯ ಮೂಲಭೂತ ಕೆಲಸಗಳು, ಅಗ್ನಿ ನಿಯಂತ್ರಕ ವ್ಯವಸ್ಥೆ, ಕಟ್ಟದ ಸುತ್ತಲೂ ರಕ್ಷಣಾಗೋಡೆ ಸೇರಿದಂತೆ ಪೀಠೋಪಕರಣಕ್ಕಾಗಿ ಹೆಚ್ಚುವರಿಯಾಗಿ ರೂ.15 ಕೋಟಿ ಅನುದಾನಕ್ಕೆ ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಶೇ.4 ರಷ್ಟು ಜಿ.ಎಸ್.ಟಿ ಹಾಗೂ ಕಾಮಗಾರಿ ವೆಚ್ಚದಲ್ಲಿ ಉಂಟಾಗುವ ಹೆಚ್ಚಳಕ್ಕೂ ಅನುದಾನ ಬೇಕಾಗಿದೆ. ಹಳೆ ರಾಷ್ಟ್ರೀಯ ಹೆದ್ದಾರಿಯಿಂದ ನೂತನ ಜಿಲ್ಲಾಧಿಕಾರಿ ಕಚೇರಿಗೆ ಸಂಪರ್ಕಿಸಲು ರೂ.5 ಕೋಟಿ ರಸ್ತೆ ನಿರ್ಮಿಸಲು ಡಿ.ಎಂ.ಎಫ್ ಅನುದಾನ ನೀಡಲು ಚರ್ಚಿಸಲಾಗುತ್ತಿದೆ. ನೂತನ ಕಚೇರಿ ನಗರದ ಹೊರ ವಲಯದಲ್ಲಿ ಇರುವುದರಿಂದ ಜನರಿಗೆ ತೊಂದರೆಯಾಗದಂತೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ಕಚೇರಿಗಳು ನಗರದಲ್ಲಿಯೇ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಲೋಕೋಪಯೋಗಿ ಸಚಿವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೀಶ್ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ತಹಶೀಲ್ದಾರ್ ಗೋವಿಂದ ರಾಜು ಸೇರಿದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ