Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸವಿತಾ ಸಮಾಜ ಅಭಿವೃದ್ಧಿ ನಿಗಮ : ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ), ಜೂನ್.06: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ : ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸವಿತಾ ಸಮಾಜ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. 18 ರಿಂದ 55 ವರ್ಷಗಳಿಂದ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾನುಭಾವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಯೋಜನೆಗಳ ವಿವರ : ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆ(ಈ ಯೋಜನೆಯಡಿ ಅರ್ಜಿ  www.kaushalkar.com     ನಲ್ಲಿ ಸಲ್ಲಿಸಬೇಕು. ಅರ್ಜಿಗಳನ್ನು ಬೆಂಗಳೂರುಒನ್, ಕರ್ನಾಟಕಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ.ಬ್ಲಾಕ್ ನ ಸವಿತಾ ಸಮಾಜ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ