Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ





ಬೆಂಗಳೂರು, ಏಪ್ರಿಲ್ 1

ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.



2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು.



ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ.ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ ಎಂದರು.



ಮೊಬೈಲ್ ಸಂಖ್ಯೆ ಮತ್ತು OTP ಮೂಲಕ ಸುಲಭವಾಗಿ 5 ರಿಂದ 10 ನಿಮಿಷಗಳಲ್ಲಿ ಸ್ವಯಂ ಗಣತಿ ಪೂರ್ಣಗೊಳಿಸಬಹುದಾಗಿದೆ ಎಂದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಮ್ಮ ಅರ್ಜಿಯ ಸಂಖ್ಯೆ ದೊರೆಯುವುದು. ಈ ಸಂಖ್ಯೆಯನ್ನು ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಿದಲ್ಲಿ, ಗಣತಿದಾರರು ಸ್ವಲ್ಪ ಸಮಯದಲ್ಲಿ ಗಣತಿ ಪೂರ್ಣಗೊಳಿಸಲು ಹಾಗೂ ಯಾವುದಾದರೂ ತಿದ್ದುಪಡಿ ಇದ್ದಲ್ಲಿ ಮಾಡಿಕೊಳ್ಳಬಹುದಾಗಿದೆ ಎಂದ ಅವರು, ಒಂದು ವೇಳೆ ಮೊಬೈಲ್ ಅಥವಾ ಕಂಪ್ಯೂಟರ್ ಇಲ್ಲದಿದ್ದಲ್ಲಿ ಸಮೀಪದ ಕಂಪ್ಯೂಟರ್ ಕೇಂದ್ರಗಳಿಂದ ಅಥವಾ ಸ್ನೇಹಿತರ ಮೊಬೈಲಿನಿಂದ ಮಾಹಿತಿ ಸಲ್ಲಿಸಿ ನೋಂದಣಿ ಸಂಖ್ಯೆಯನ್ನು ಪಡೆಯಬೇಕು ಎಂದು ಹೇಳಿದರು.



ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಮರ್ಪಕ ಸಂಪನ್ಮೂಲ ಹಂಚಿಕೆಗೆ ದಾರಿ ತೋರುತ್ತದೆ. ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇದು ಕೇವಲ ಕರ್ತವ್ಯವಲ್ಲ— ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆಯಾಗಿದೆ. ಇಂದು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು ಮತ್ತು ಸೇವೆಗಳಿಗೆ ಆಧಾರ ವಾಗುತ್ತದೆ. ಜನಗಣತಿಯಿಂದ ಯಾರು ಬಿಟ್ಟು ಹೋಗದಂತೆ ಸರ್ಕಾರ ಮುತುವರ್ಜಿ ವಹಿಸಿದೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವು ಎಲ್ಲರೂ ಕೈಜೋಡಿಸೋಣ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.



ಇದೇ ವೇಳೆ, ಜನಗಣತಿ ನಿರ್ದೇಶಕ ರಾಮಚಂದ್ರನ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸ್ವಯಂ ಗಣತಿ ವ್ಯವಸ್ಥೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು