Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಏಪ್ರಿಲ್ 01 ರಿಂದ 15 ರವರೆಗೆ ಸ್ವಯಂ ಗಣತಿಗೆ ಅವಕಾಶ: ಡಿಸಿ



ಶಿವಮೊಗ್ಗ, ಏ.03ಭಾರತದ ಜನಗಣತಿ-2027ರ ಅಂಗವಾಗಿ

ದಿ: 1-04-2026 ರಿಂದ 15-04-2026 ರವರೆಗೆ

'ಸ್ವಯಂ ಗಣತಿ' ಗೆ ಅವಕಾಶ ಕಲ್ಪಿಸಲಾಗಿದೆ.

ಸ್ವಯಂ ಜನಗಣತಿ (Self-Enumeration) ಎಂಬುದು ಡಿಜಿಟಲ್ ಜನಗಣತಿಯ ಒಂದು ಪ್ರಮುಖ ಭಾಗವಾಗಿದೆ.

ಏನಿದು ಸ್ವಯಂ ಜನಗಣತಿ?

ಹಿಂದೆ ಜನಗಣತಿ ಮಾಡುವವರು ಮನೆಗೆ ಬಂದು ಮಾಹಿತಿ ಪಡೆದು ಫಾರಂ ತುಂಬುತ್ತಿದ್ದರು. ಆದರೆ ಈಗ ನಾಗರಿಕರು ತಾವಾಗಿಯೇ ಆನ್‌ಲೈನ್ ಪೋರ್ಟಲ್ ಮೂಲಕ ತಮ್ಮ ಕುಟುಂಬದ ವಿವರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇದನ್ನೇ 'ಸ್ವಯಂ ಜನಗಣತಿ' ಎಂದು ಕರೆಯಲಾಗುತ್ತದೆ.

ಇದು ಹೇಗೆ ಕೆಲಸ ಮಾಡುತ್ತದೆ?

ನೋಂದಣಿ: ನಾಗರಿಕರು ಜನಗಣತಿಯ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ ತಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಆಗಬೇಕು.

ಮಾಹಿತಿ ಸಲ್ಲಿಕೆ: ಕುಟುಂಬದ ಸದಸ್ಯರು, ಶಿಕ್ಷಣ, ಉದ್ಯೋಗ, ಮತ್ತು ಮನೆಯ ಸೌಲಭ್ಯಗಳ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ ಫಾರ್ಮ್ ಭರ್ತಿ ಮಾಡಬೇಕು.

ಕೋಡ್ ಸ್ವೀಕೃತಿ: ನೀವು ಮಾಹಿತಿಯನ್ನು ಸಲ್ಲಿಸಿದ ನಂತರ, ನಿಮ್ಮ ಮೊಬೈಲ್‌ಗೆ ಒಂದು ಉಲ್ಲೇಖ ಸಂಖ್ಯೆ (Reference Number) ಬರುತ್ತದೆ.

ಗಣತಿದಾರರಿಗೆ ಸಲ್ಲಿಕೆ: ಜನಗಣತಿ ಅಧಿಕಾರಿಗಳು (Enumerators) ನಿಮ್ಮ ಮನೆಗೆ ಬಂದಾಗ, ನೀವು ಈ ಉಲ್ಲೇಖ ಸಂಖ್ಯೆಯನ್ನು ಅವರಿಗೆ ನೀಡಿದರೆ ಸಾಕು. ಅವರು ಮತ್ತೆ ಎಲ್ಲ ಪ್ರಶ್ನೆಗಳನ್ನು ಕೇಳುವ ಅಗತ್ಯವಿರುವುದಿಲ್ಲ.

ಕರ್ನಾಟಕದಲ್ಲಿ ಮೊದಲ ಹಂತದ 'ಮನೆಗಳ ಪಟ್ಟಿ ಮತ್ತು ಮನೆ ಗಣತಿ' ಪ್ರಕ್ರಿಯೆಯು ದಿನಾಂಕ 16.04.2026 ರಿಂದ 15.05.2026 ರವೆರೆಗೆ ನಡೆಯಲಿದ್ದು

ಒಟ್ಟು 30 ದಿನಗಳ ಕಾಲ ನಡೆಯುವ ಈ ಗಣತಿಯಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಆಸ್ತಿಪಾಸ್ತಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.



ಸ್ವಯಂ ಗಣತಿ ಮಾಡುವ ವಿಧಾನ:

ಅಧಿಕೃತ ಪೋರ್ಟಲ್‌ನಲ್ಲಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗುವುದು.

ನಿಮ್ಮ ಸ್ಥಳವನ್ನು ಆಯ್ಕೆ ಮಾಡಿ, ನಕ್ಷೆಯಲ್ಲಿ ಮನೆಯನ್ನು ಗುರುತಿಸುವುದು.

ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವುದು.

ಸಲ್ಲಿಕೆಯ ನಂತರ ಲಭಿಸುವ SE ID(ಎಸ್ಇ ಐಡಿ) ಅನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು. ಹಾಗೂ ಗಣತಿದಾರರು ಭೇಟಿ ನೀಡಿದಾಗ ಅವರಿಗೆ ತೋರಿಸಬೇಕು.

ಗಣತಿದಾರರು ಮತ್ತು ಮೇಲ್ವಿಚಾರಕರ ಕ್ಷೇತ್ರ ಭೇಟಿ :

ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಸ್ವಯಂ ಗಣತಿ ಮಾಡಿಕೊಂಡವರು ತಮ್ಮಲ್ಲಿರುವ ಎಸ್ ಇ‌ ಐಡಿ ಅನ್ನು ಗಣತಿದಾರರಿಗೆ ತೋರಿಸಿ ದತ್ತಾಂಶವನ್ನು ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಸ್ವಯಂ ಗಣತಿ ಮಾಡದಿದ್ದಲ್ಲಿ, ಗಣತಿದಾರರೇ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ.

ಸಾರ್ವಜನಿಕರು, ಅಧಿಕಾರಿಗಳು, ಮತ್ತು ಸಿಬ್ಬಂದಿಗಳು https://se.census.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಸ್ವಯಂ‌ ಗಣತಿಯಲ್ಲಿ ಭಾಗವಹಿಸುಂತೆ ಜಿಲ್ಲಾಡಳಿತ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ತಾಲೂಕು ಆಡಳಿತ, ಸ್ಥಳೀಯ ಸಂಸ್ಥೆ ಅಥವಾ ಜಿಲ್ಲಾಡಳಿತದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ