Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಕಾರ್ಯಾದೇಶ ಪ್ರಮಾಣ ಪತ್ರ, ಗುರುತಿನ ಚೀಟಿ ವಿತರಣೆ --- *ಸ್ವಚ್ಛ, ಸುಂದರ ನಗರವಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ: ಪಾಲಿಕೆ ಆಯುಕ್ತ ಜುಬೀನ್ ಮೊಹಪಾತ್ರ ಸಲಹೆ*



ರಾಯಚೂರು ಆಗಸ್ಟ್ 14ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯ ವಿವಿಧ ಘಟಕಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸಬೇಕು. ರಾಯಚೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬೀನ್ ಮೊಹಪಾತ್ರ ಅವರು ಹೇಳಿದರು.

ಆಗಸ್ಟ್ 13ರ ಬುಧವಾರ ದಂದು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸ್ವಚ್ಛ ಭಾರತ ಅಭಿಯಾನ 2.0 ಅಡಿ ಐಇಸಿ ಚಟುವಟಿಕೆಗಳ ಕುರಿತು ಸಮುದಾಯ ಸಂಚಾಲಕರ ಹುದ್ದೆಗೆ ಆಯ್ಕೆಯಾದ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಕಾರ್ಯಾದೇಶ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ನೀಡಿ ಅವರು ಮಾತನಾಡಿದರು.

ಸಹಕಾರ ಸಂಘದ ಸದಸ್ಯರು ಸದಸ್ಯರೊಂದಿಗೆ ಕೆಲಸ ಮಾಡುವುದು ಸಾಮಾನ್ಯ ವಿಚಾರವಲ್ಲ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಭಾವಿಸಿ, ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪಾಲಿಕೆಯ ವಿವಿಧ ತೆರಿಗೆ ಅಚ್ಚುಕಟ್ಟಾಗಿ ವಸೂಲಿ ಮಾಡಬೇಕು. ಒಂದೊAದು ರೂಪಾಯಿಯನ್ನು ಜೋಡಿಸಿ ದೊಡ್ಡ ಕೆಲಸಗಳನ್ನು ಪಾಲಿಕೆಯಿಂದ ಮಾಡಬಹುದಾಗಿದೆ ಎಂದರು.

ಪಾಲಿಕೆಯ ಅಭಿವೃದ್ಧಿ ವಿಷಯದಲ್ಲಿ ಸಹಕಾರ ಸಂಘದ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ತಾವು ಶಿಕ್ಷಣವಂತರಾಗಿದ್ದು, ಕಂಪ್ಯೂಟರ್ ಜ್ಞಾನ ಪಡೆಯಬೇಕು. ಸರ್ಕಾರಿ ಸಿಬ್ಬಂದಿಯAತೆ ಕೆಲಸ ಕಾರ್ಯಗಳನ್ನು ಮಾಡಬೇಕು. ಸಂಬAಧಿಸಿದ ವಿಭಾಗದ ಮುಖ್ಯಸ್ಥರ ಸಲಹೆಗಳನ್ನು ಪಡೆದು ಸಮಾಜವನ್ನು ಬದಲಾವಣೆ ಮಾಡಲು ಶ್ರಮಿಸಬೇಕೆಂದರು.

ಪಾಲಿಕೆಯ ವಾರ್ಡ್ ಮಟ್ಟದ ವಿವರಗಳು ಮತ್ತು ಮೂಲಸೌಕರ್ಯಗಳ ಸಮೀಕ್ಷೆಯನ್ನು ನಡೆಸುವ ಮೂಲಕ ತಳಮಟ್ಟದ ಸಮೀಕ್ಷೆ ನಡೆಸಬೇಕು. ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಬೇಕು. ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯವನ್ನು ಉತ್ಪಾದಿಸುವಲ್ಲಿ ನಿಯಮಗಳ ಪಾಲನೆ, ಒಣ ಮತ್ತು ಹಸಿ ತ್ಯಾಜ್ಯದ ಸಂಸ್ಕರಣೆ ಮಾಡಬೇಕು. ಬಳಕೆದಾರರ ಶುಲ್ಕ ಸಂಗ್ರಹಣೆಗೆ ನಾಗರಿಕರನ್ನು ಸಂವೇದನಾಶೀಲರನ್ನಾಗಿಸಬೇಕು. ಕಸ ಬಿಸಾಡಲು ಆಸ್ಪದ ನೀಡುವಂತಹ ಸ್ಥಳಗಳಲ್ಲಿ ಅವಕಾಶ ಕೊಡಬಾರದು ಎಂದರು.

ಪಾಲಿಕೆಯ ವ್ಯಾಪ್ತಿಗೆ ಬರುವ ಎಲ್ಲಾ ವಸತಿ ಪ್ರದೇಶಗಳು, ಶಾಲೆಗಳು, ಮುಖ್ಯ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಉದ್ಯಾನವನಗಳು, ಆಸ್ಪತ್ರೆಗಳು, ರೆಸ್ಟೋರೆಂಟ್‌ಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛ ಭಾರತ್ ಮಿಷನ್ (ನಗರ) ಮಾರ್ಗಸೂಚಿಗಳ ಪ್ರಕಾರ ಆಯಾ ಸ್ಥಳಕ್ಕೆ ಸಂಬAಧಿಸಿದAತೆ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳಬೇಕು. ಅಲ್ಲದೆ ಸ್ವಚ್ಛ ಸರ್ವೇಕ್ಷಣೆ ಮತ್ತು ಸ್ವಚ್ಛತೆಯನ್ನು ಪ್ರಮಾಣೀಕರಿಸಬೇಕೆಂದರು.

ಸ್ವಚ್ಛ ಸರ್ವೇಕ್ಷಣ್ ಲೀಗ್‌ಗಳಲ್ಲಿ ಭಾಗವಹಿಸುವಂತೆ ಮತ್ತು ಅದರ ಬಗ್ಗೆ ಸಕಾರಾತ್ಮಕ ಹಿಮ್ಮಾಹಿತಿ ಪಡೆಯಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರನ್ನು ಸಂಪರ್ಕಿಸಲು ಸ್ವಸಹಾಯ ಗುಂಪಿನ ಸದಸ್ಯರು ಪಾಲಿಕೆಗೆ ಸಹಾಯ ಮಾಡಬೇಕು. ಸಾರ್ವಜನಿಕರು ಸಾಮಾನ್ಯವಾಗಿ ಕಸ ಬಿಸಾಡುವಂತಹ ಜಾಗಗಳ ಮೇಲೆ ಕಣ್ಣು ಇಡಬೇಕು. ಮತ್ತು ಎರಡನೇ ಹಂತದ ಕಸ ಸಂಗ್ರಹಿಸುವ ವ್ಯವಸ್ಥೆಯ ಬಗ್ಗೆ ಮೇಲ್ವಿಚಾರಣೆಯಲ್ಲಿ ನೆರವಾಗಬೇಕು. ತ್ಯಾಜ್ಯ ಮೂಲದಲ್ಲಿ ಕಸವನ್ನು ಪ್ರತ್ಯೇಕಿಸುವ ಸಲುವಾಗಿ ಮನೆಮನೆಗೂ ತೆರಳಿ ಕಸ ವಿಂಗಡಣೆಯ ಬಗ್ಗೆ ಅರಿವು ಮೂಡಿಸಬೇಕೆಂದು ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸೂಚಿಸಿದರು.

ಈ ವೇಳೆ ಸ್ವ-ಸಹಾಯ ಗುಂಪುಗಳ ಸದಸ್ಯರಿಂದ ಪಾಲಿಕೆಯ ಅಧ್ಯಕ್ಷರಿಗೆ ಹಾಗೂ ಆಯುಕ್ತರಿಗೆ ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಪಾಲಿಕೆಯ ಅಭಿವೃದ್ಧಿ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜೈಪಾಲ್ ರೆಡ್ಡಿ, ಪಾಲಿಕೆಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ