Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಸಿರುಗುಪ್ಪ: ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್(ಸುನ್ನಿ) ವಕ್ಫ್ ಸಂಸ್ಥೆಯ ದಾಖಾಲಾತಿ ನೋಂದಣಿ ಪ್ರಕ್ರಿಯೆ





ಬಳ್ಳಾರಿ,ಜ.04

ಸಿರುಗುಪ್ಪ ಪಟ್ಟಣದ ವಕ್ಫ್ ಸಂಸ್ಥೆ ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್(ಸುನ್ನಿ) ಸಮಿತಿಯ ಸಾಮಾನ್ಯ ಸದಸ್ಯರ ದಾಖಾಲಾತಿ ನೋಂದಣಿ ಪ್ರಕ್ರಿಯೆಯು ಜನವರಿ 06 ರಿಂದ ಜನವರಿ 31 ರವರೆಗೆ ನಡೆಯಲಿದೆ ಎಂದು ಸಿರುಗುಪ್ಪ ಪಟ್ಟಣದ ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್(ಸುನ್ನಿ) ನ ಆಡಳಿತಾಧಿಕಾರಿ ತಿಳಿಸಿದ್ದಾರೆ.

ಜನವರಿ 06 ರಿಂದ ಜನವರಿ 20 ರವರೆಗೆ ಬೆಳಿಗ್ಗೆ 10:30 ಗಂಟೆಯಿoದ ಮಧ್ಯಾಹ್ನ 2:30 ಗಂಟೆ ರ ಅವಧಿಯಲ್ಲಿ ಹೊಸ ಸದಸ್ಯರ ದಾಖಲಾತಿಗಾಗಿ ಅರ್ಜಿ ನಮೂನೆ ವಿತರಣೆ ಮಾಡಲಾಗುತ್ತದೆ. ಭರ್ತಿ ಮಾಡಿದ ಅರ್ಜಿ ನಮೂನೆಗಳೊಂದಿಗೆ 2 ಇತ್ತೀಚಿನ ಭಾವಚಿತ್ರಗಳು ಹಾಗೂ ರೂ.600/- ಶುಲ್ಕ ಹಾಗೂ ಅಧಿಕೃತ ವಿಳಾಸದ 02 ಗುರುತಿನ ಚೀಟಿಗಳೊಂದಿಗೆ ಜನವರಿ 20 ರೊಳಗೆ ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್(ಸುನ್ನಿ) ರ ಕಚೇರಿಗೆ ಸಲ್ಲಿಸಬೇಕು.

ದಾಖಲಾದ ಸದಸ್ಯರ ಕರಡು ಪಟ್ಟಿಯನ್ನು ಜನವರಿ 25 ರಂದು ಪ್ರಕಟಿಸಲಾಗುತ್ತದೆ. ಕರಡು ಪಟ್ಟಿಗೆ ಸಂಬoಧಿಸಿದoತೆ ಆಕ್ಷೇಪಣೆ ಹಾಗೂ ಸಲಹೆ-ಸೂಚನೆಗಳಿದ್ದಲ್ಲಿ ಜನವರಿ 27 ರಿಂದ ಜನವರಿ 28 ರವರೆಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.30 ಗಂಟೆ ರೊಳಗೆ ಸಲ್ಲಿಸಬಹುದು.

ಆಕ್ಷೇಪಣೆಗಳ ವಿಚಾರಣೆ ಜನವರಿ 29 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 2:30 ಗಂಟೆ ರೊಳಗೆ ನಡೆಸಲಾಗುತ್ತದೆ. ದಾಖಲಾದ ಸಾಮಾನ್ಯ ಸದಸ್ಯರ ಅಂತಿಮ ಪಟ್ಟಿಯನ್ನು ಜನವರಿ 31 ರಂದು ಮಧ್ಯಾಹ್ನ 3 ಗಂಟೆಗೆ ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್(ಸುನ್ನಿ) ರ ಕಚೇರಿಯಲ್ಲಿ ಪ್ರಕಟಿಸಲಾಗುವುದು.

ಈಗಾಗಲೇ 2019-20ರಲ್ಲಿ ಸದಸ್ಯತ್ವ ಪಡೆದಿರುವ ಸಾಮಾನ್ಯ ಸದಸ್ಯರು ಒಟ್ಟು ಶುಲ್ಕ ರೂ.1000 (ಒಂದು ಸಾವಿರ ರೂಪಾಯಿ), ಆಧಾರ್ ಕಾರ್ಡ್ ಪ್ರತಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಕಡ್ಡಾಯವಾಗಿ ಸಲ್ಲಿಸಬೇಕು. ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್(ಸುನ್ನಿ) ನೋಂದಣಿ ಅಧಿಕಾರಿಗಳ ಕಚೇರಿಯು ಸರ್ಕಾರಿ ರಜಾದಿನಗಳಲ್ಲಿಯೂ ಸಹ ಕಾರ್ಯನಿರ್ವಹಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ