Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸ್ವಾತಂತ್ರ‍್ಯ ದಿನೋತ್ಸವಕ್ಕೆ   ಅಗತ್ಯ ಸಿದ್ಧತೆಯಾಗಲಿ: ಶಿವಾನಂದ


ರಾಯಚೂರು ಜುಲೈ 31  ಜಿಲ್ಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ‍್ಯ ದಿನೋತ್ಸವದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ ಆಯೋಜಿಸಬೇಕು. ಸ್ವಾತಂತ್ರ‍್ಯೋತ್ಸವದ ಸಾರ್ಥಕತೆಯನ್ನು ಬಿಂಬಿಸುವ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜುಲೈ 31ರಂದು ಗುರುವಾರ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಿನಾಚರಣೆಗೆ ಸಂಬಂಧಿಸಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಅದರಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ನಗರದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ರಾಮಧುನ ಕಾರ್ಯಕ್ರಮಕ್ಕಾಗಿ ಶ್ಯಾಮಿಯಾನ, ಆಸನ, ಲೈಟ್, ಮೈಕ್, ಹೂವಿನ ಹಾರಗಳು ಸ್ವಚ್ಛತೆ ಹಾಗೂ ಇತರೆ ವ್ಯವಸ್ಥೆ ಮಾಡಬೇಕು.
ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಬಳಿ ಆಸನ, ಮೈಕ್, ಹೂವಿನ ಹಾರಗಳು ಹಾಗೂ ಸರ್ವ ಧರ್ಮಗಳ ಪ್ರಾರ್ಥನೆ ಕಾರ್ಯಕ್ರಮದ ವ್ಯವಸ್ಥೆಯನ್ನು ರಾಯಚೂರು ಮಹಾನಗರ ಪಾಲಿಕೆಯು ಅಚ್ಚುಕಟ್ಟಾಗಿ ಮಾಡಬೇಕೆಂದು ತಿಳಿಸಿದರು.
ಸ್ವಾತಂತ್ರೋತ್ಸವ ದಿನದಂದು
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕಾಗಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ವಿವಿಧ ಸಮಿತಿ,‌ ಪ್ರಾಧಿಕಾರದ ಅಧ್ಯಕ್ಷರು,
ನ್ಯಾಯಾಧೀಶರು, ಪತ್ರಕರ್ತರು, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು, ಮಹಿಳೆಯರು ಹಾಗೂ ಇತರರಿಗೆ ಪ್ರತ್ಯೇಕವಾದ ಆಸನಗಳ ವ್ಯವಸ್ಥೆ ಮಾಡಬೇಕು.
ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ಇನ್ನೀತರ ಕಡೆ ದೀಪಾಲಂಕಾರ ಮಾಡುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅಲ್ಪೋಪಹಾರ ಹಾಗೂ ಚಹಾ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ತಿಳಿಸಿದರು.
ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಭಾಷಣಕ್ಕಾಗಿ ವಿವಿಧ ಇಲಾಖೆಯ ಅಧಿಕಾರಿಗಳು, ಆಯಾ ಯೋಜನೆಗಳ ಪ್ರಗತಿ ಮತ್ತು ಯಶೋಗಾಥೆಯ  ಮಾಹಿತಿಯನ್ನು ಸಿದ್ಧಪಡಿಸಿ ವಾರ್ತಾ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಆಗಸ್ಟ್ 15ರಂದು ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಹಿಸುವಂತೆ
ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಡಿ ಪಂಪಣ್ಣ, ಭಾರತ ಸೇವಾದಳದ ವಿದ್ಯಾಸಾಗರ, ತಹಸೀಲ್ದಾರ ಬಿ ರಾಜಶೇಖರ, ವಿವಿಧ ಇಲಾಖೆಯ ಅಧಿಕಾರಿಗಳಾದ ಕೃಷ್ಣ ಶಾವಂತಗೇರಿ, ರಾಜಕುಮಾರ ಪಾಟೀಲ, ಈರೇಶ ನಾಯಕ, ಆರ್ ಎಸ್ ಪಾಟೀಲ, ಕೆ ರಂಗಸ್ವಾಮಿ, ಆದೇಶ, ಡಾ.ಪ್ರಜ್ವಲ್ ಡಿ ಎಸ್ ಸೇರಿದಂತೆ ಇನ್ನೀತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ