Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾಪಟುಗಳ ಪ್ರೋತ್ಸಾಹಧನ, ಶೈಕ್ಷಣಿಕ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ----

ಕೊಪ್ಪಳ ಜುಲೈ 29 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಗೆ ನೀಡಲಾಗುವ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ ಅವರು ತಿಳಿಸಿದ್ದಾರೆ.
ಇಲಾಖೆಯ ಯೋಜನೆಗಳಾದ 2026-27ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಈ ಹಿಂದೆ 31 ಜುಲೈ 2026 ರವರೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಕ್ರೀಡಾಪಟುಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ: ಅರ್ಹ ಕ್ರೀಡಾಪಟುಗಳು ಸೇವಾ ಸಿಂಧು ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕವೇ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಅರ್ಜಿ ಸಲ್ಲಿಕೆ ಹಾಗೂ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಚ್ಛಿಸುವವರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ್ ರಸ್ತೆ, ಕೊಪ್ಪಳ, ದೂರವಾಣಿ ಸಂಖ್ಯೆ: 08539-230121, ಇಲ್ಲಿಗೆ ಅಥವಾ ಯುವ ಸಹಾಯವಾಣಿ: 155265 ಗೆ ಕಚೇರಿ ವೇಳೆಯಲ್ಲಿ ಈ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ