Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿಯಲ್ಲಿ ರಾಜ್ಯಮಟ್ಟದ ಆಯುರ್ವೇದ ಶೈಕ್ಷಣಿಕ ಸಂವಾದ

ಬಳ್ಳಾರಿ,ಜು.23.
ನಗರದ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸುವರ್ಣ ಸಂಭ್ರಮದ ಅಂಗವಾಗಿ ‘ಬಸ್ತಿ – ಅರ್ಧ ಚಿಕಿತ್ಸೆಯೇ ಅಥವಾ ಪೂರ್ಣ ಚಿಕಿತ್ಸೆಯೇ?’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಶೈಕ್ಷಣಿಕ ಸಂವಾದವನ್ನು (ಸಂಶೋಧನಾ ಚರ್ಚೆ) ಶುಕ್ರವಾರ ಆಯೋಜಿಸಲಾಗಿತ್ತು.
ರಾಜ್ಯದ ವಿವಿಧ 25 ಆಯುರ್ವೇದ ಮಹಾವಿದ್ಯಾಲಯಗಳಿಂದ ಆಗಮಿಸಿದ್ದ ಪಂಚಕರ್ಮ ಸ್ನಾತಕೋತ್ತರ ವಿದ್ಯಾರ್ಥಿಗಳು, ಆಯುರ್ವೇದದ ಮೂಲ ಸಿದ್ಧಾಂತಗಳು ಹಾಗೂ ಆಧುನಿಕ ವೈಜ್ಞಾನಿಕ ದೃಷ್ಟಿಕೋನಗಳನ್ನು ಆಧಾರವಾಗಿಟ್ಟುಕೊಂಡು ತಮ್ಮ ವೈಚಾರಿಕ್ ನಂಬಿಕೆ ಮತ್ತು ಅಭಿಪ್ರಾಯಗಳನ್ನು ವಾಗ್ವಾದದ ಮೂಲಕ ಮಂಡಿಸಿದರು.
*ವಿಮರ್ಶಾತ್ಮಕ ಚಿಂತನೆಗೆ ವೇದಿಕೆ:*
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಡಾ. ಸಂತೋಷ್ ಎಲ್. ಯಡಹಳ್ಳಿ ಅವರು, ‘ಆಯುರ್ವೇದದ ಮೂಲತತ್ವಗಳ ಕುರಿತು ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ ಹಾಗೂ ಸಂಶೋಧನಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಈ ಶೈಕ್ಷಣಿಕ ಸಂವಾದವನ್ನು ಆಯೋಜಿಸಲಾಗಿದೆ,’ ಎಂದು ವಿಷಯದ ಮಹತ್ವ ವಿವರಿಸಿದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ರಾಜಶೇಖರ್ ಎಸ್. ಗಾಣಿಗೇರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಚರ್ಚಾ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ವಿಷಯದ ಆಳವಾದ ಅರಿವು, ಆತ್ಮವಿಶ್ವಾಸ ಮತ್ತು ವೈಜ್ಞಾನಿಕ ಚರ್ಚೆಯ ಸಂಸ್ಕೃತಿಯನ್ನು ಬೆಳೆಸುತ್ತವೆ. ಕಾಲೇಜಿನ ಸುವರ್ಣ ಮಹೋತ್ಸವದ ಭಾಗವಾಗಿ ನಡೆದ ಈ ಕಾರ್ಯಕ್ರಮವು ರಾಜ್ಯದ ವಿವಿಧ ವೈದ್ಯಕೀಯ ಸಂಸ್ಥೆಗಳ ನಡುವೆ ಶೈಕ್ಷಣಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗಳಿಸಿದೆ ಎಂದರು.
*ಸ್ಪರ್ಧೆಯ ವಿಜೇತರು:*
ಸಂವಾದದ ತೀರ್ಪುಗಾರರಾಗಿ ಡಾ. ವಿನಯಕುಮಾರ್ ಹಾಗೂ ಡಾ. ಅಶ್ವಿನ್ ಕುಮಾರ್ ಕಾರ್ಯನಿರ್ವಹಿಸಿದರು.
*ಪ್ರಥಮ ಸ್ಥಾನ:* ‘ಮೇಧಾ' ತಂಡ (ಮಾರ್ಗದರ್ಶಕರು: ಡಾ. ರಶ್ಮಿ)
*ದ್ವಿತೀಯ ಸ್ಥಾನ:* ‘ವಿವೇಕ' ತಂಡ (ಮಾರ್ಗದರ್ಶಕರು: ಡಾ. ಜೈರಾಜ್ ಬಸರಿಗಿಡದ)
ಕಾರ್ಯಕ್ರಮದ ಸಂವಾದದ ರಾಜ್ಯಮಟ್ಟದ ಕಾರ್ಯದರ್ಶಿಯಾಗಿ ಡಾ. ಸಂತೋಷ್ ಎಲ್. ಯಡಹಳ್ಳಿ ಹಾಗೂ ಸಹ-ಕಾರ್ಯದರ್ಶಿಯಾಗಿ ಡಾ. ಶಿಲ್ಪಶ್ರೀ ಇಡೀ ಸಂವಾದ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಡಾ. ನಂದಿನಿ ಹಿರೇಮಠ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹ-ಕಾರ್ಯದರ್ಶಿ ಡಾ. ವಿಜಯ ಮಹಾಂತೇಶ್ ಹೂಗಾರ್ ವಂದಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಆಯುರ್ವೇದ ಕಾಲೇಜುಗಳ ಅಧ್ಯಾಪಕರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಆಯುರ್ವೇದ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು.
-----------
See less

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ