Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಒತ್ತಡ ನಿರ್ವಹಣೆ ಮತ್ತು ವೃತ್ತಿ ತರಬೇತಿ ಕಾರ್ಯಾಗಾರ

ಚಿತ್ರದುರ್ಗಡಿ.10:

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಲ್ತಾನಿಪುರ ಪಿಚ್ಚಾರಹಟ್ಟಿ ಸಮುದಾಯ ಭವನದಲ್ಲಿ ಮಂಗಳವಾರ ಜನ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಒತ್ತಡ ನಿರ್ವಹಣೆ ಮತ್ತು ವೃತ್ತಿ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪಿ.ಶರೀಫ್ ಅವರು, ಒತ್ತಡ ನಿರ್ವಹಣೆಯ ಬಗ್ಗೆ ಕುಟುಂಬದಲ್ಲಿ ತಾಳ್ಮೆ ತುಂಬಾ ಮುಖ್ಯ. ಯಾವುದೇ ಒಂದು ವಿಷಯದಲ್ಲೂ ಜವಾಬ್ದಾರಿ ತೆಗೆದುಕೊಳ್ಳುವ ಮೊದಲು ಹಿಡಿ ಕುಟುಂಬದವರು ಕುಳಿತು ಚರ್ಚಿಸಿ, ನಂತರದಲ್ಲಿ ಒಳ್ಳೆಯ ವಿಷಯ ಅಥವಾ ಅಭಿಪ್ರಾಯ ತಿಳಿಸಬೇಕು ಎಂದರು.

ಕುಟುಂಬದಲ್ಲಿ ಸರ್ವರು ಸಮಾನರಾಗಿರಬೇಕು. ಸಣ್ಣ ಸಣ್ಣ ವಿಷಯಗಳಿಗೆ ಜಗಳವಾದದಂತೆ ಸಮಾಧಾನದಿಂದ ವಿಷಯ ಮನ್ನಣೆ ಮಾಡಬೇಕು ಎಂದು ಹೇಳಿದರು.

ವಕೀಲೆ ಶಕೀಲಾ ಬಾನು ಅವರು, ಸಖಿ ಒನ್ ಸ್ಟಾಪ್ ಸೆಂಟರ್‍ನ ಕಾರ್ಯವೈಖರಿ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಜನ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮ ಸಂಯೋಜಕಿ ಶೃತಿ ಮಾತನಾಡಿ, ಕೌಶಲ್ಯ ತರಬೇತಿ ಮತ್ತು ವೃತ್ತಿ ತರಬೇತಿ ಪಡೆಯುವುದು ತುಂಬಾ ಮುಖ್ಯವಾಗಿದೆ. ಸರ್ಕಾರದಿಂದ ತರಬೇತಿ ಪಡೆದ ನಂತರ ಸರ್ಟಿಫಿಕೇಟ್ ಅನ್ನು ವಿತರಿಸಲಾಗುವುದು. ಇದರಿಂದ ಮುಂದಿನ ದಿನಗಳಲ್ಲಿ ಇಲಾಖೆಗಳಿಂದ ಸಬ್ಸಿಡಿ ಅಥವಾ ಸಹಾಯಧನ ಪಡೆದು ವೃತ್ತಿಯನ್ನು ನಿರ್ವಹಿಸಿಕೊಂಡು ಹೋಗಬಹುದು ಎಂದು ತಿಳಿಸಿದರು.

ಮಹಿಳಾ ಸಬಲೀಕರಣ ಘಟಕದ ಜಂಡರ್ ಸ್ಪೆಷಲಿಸ್ಟ್ ಟಿ.ಗೀತಾ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ,ಪೋಕ್ಸೋ ಕಾಯ್ದೆ ಮತ್ತು ಜಿಲ್ಲೆಯಲ್ಲಿ ಶಕ್ತಿ ಸದನ ಸಖಿನಿವಾಸ್ ಇವುಗಳ ಕಾರ್ಯವೈಖರಿಗಳ ಬಗ್ಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಇರುವ ಮಹಿಳಾಧಾರಿತ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ನಂತರದಲ್ಲಿ ವೃತ್ತಿ ತರಬೇತಿಯನ್ನು ಪಡೆದ ಅಭ್ಯರ್ಥಿಗಳಿಗೆ ಸರ್ಟಿಫಿಕೇಟ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ರುದ್ರಮ್ಮ, ಗ್ರಾಮಸ್ಥರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ