Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ದಿ ತರಬೇತಿಗಳ ಸದುಪಯೋಗ ಪಡೆಯಿರಿ


ಶಿವಮೊಗ್ಗ, ಮಾ.4: ಕೌಶಲ್ಯಾಭಿವೃದ್ಧಿ, ಕೈಗಾರಿಕಾಭಿವೃದ್ದಿ ಹಾಗೂ ರಾಷ್ಟçದ ಅಭಿವೃದ್ದಿಗೆ ಅತ್ಯಂತ ಅವಶ್ಯಕವಾದ ಶಿಕ್ಷಣ ಪಡೆದ ಎಲ್ಲಾ ಅಭ್ಯರ್ಥಿಗಳು ಕೌಶಲ್ಯಾಭಿವೃದ್ದಿ ತರಬೇತಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯಕುಮಾರ್ ಹೇಳಿದರು.

ಗಾಜನೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಪಿ. ಎಂ ಇಂಟರ್ನಶಿಪ್ ಅಂಡ್ ಅಪ್ರೆಂಟಿಷಿಪ್ ಯೋಜನೆಗಳ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘ ಆರಂಭಿಸಿರುವ ಅಡ್ವಾನ್ಸ್ಡ್ ಸ್ಕಿಲ್ ಅಕಾಡೆಮಿಯ ಬಗ್ಗೆ ಮಾಹಿತಿ ನೀಡಿದ ಅವರು ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರಾದ ಡಾ. ಬಿ. ವಿ. ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ಭವಿಷ್ಯ ಭಾರತದ ಗುಣಮಟ್ಟವನ್ನು ನಿರ್ಧರಿಸುವುದು. ಆದ್ದರಿಂದ ಇಂತಹ ಅವಕಾಶಗಳನ್ನು ಉಪಯೋಗಿಸಿಕೊಂಡು ಕೌಶಲ್ಯಾಭಿವೃದ್ಧಿ ಬೆಳಿಸಿಕೊಳ್ಳಬೇಕು ಎಂದರು.



ನಿರ್ದೇಶಕ ಗಣೇಶ್ ಎಂ ಅಂಗಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯ ಕಲಿತು, ಉತ್ತಮ ಉತ್ಪಾದಕರಾಗಲು, ಉದ್ಯಮಿಯಾಗಲು ಕರೆ ನೀಡಿದರು.

ಜಿಲ್ಲಾ ಶಿಶಿಕ್ಷು ನೋಡಲ್ ಅಧಿಕಾರಿ ವಿಜಯಕುಮಾರ್ ಸಪಲಿ ಮಾತನಾಡಿ, ಐಟಿಐ ತರಬೇತಿಯಾದ ನಂತರ ಅರ್ಹ ಅಭ್ಯರ್ಥಿಗಳು ಪಿಎಂಐಎಸ್ ಪೋರ್ಟಲ್ ಮತ್ತು apprenticeshipindia. gov.in ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ತರಬೇತಿ ಪಡೆದುಕೊಳ್ಳಿರಿ ಎಂದರು.

ಕಾರ್ಯಕ್ರಮದಲ್ಲಿ ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಬಿ. ಟಿ . ಶೇಖರಪ್ಪ, ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕಾಳಿದಾಸ್ ನಾಯ್ಕ್, ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿಗಳು ಹಾಗೂ ಸಹಾಯಕ ಶಿಶಿಕ್ಷು ಅಧಿಕಾರಿಗಳಾದ ಡಿ. ಮಾಲತೇಶ್ವರ್. ರಿಪ್ಪನ್‌ಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಆರ್. ಮೂರ್ತಿ, ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಭಾರ ತರಬೇತಿ ಅಧಿಕಾರಿಯಾದ ಕೆ.ಕೃಷ್ಣಮೂರ್ತಿ, ಎನ್‌ಎಸ್‌ಡಿಸಿ ಡಿಪಿಎಂಯು ರವರಾದ ಹೆಚ್. ಗೀತಾ, ಶಿವಮೊಗ್ಗ ಜಿಲ್ಲೆಯ 10 ಉದ್ದಿಮೆದಾರರು ಹಾಗೂ ತರಬೇತುದಾರರು ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು