Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಪ್ರದಾಯಿಕ ಬೆಳೆಗಳ ಬದಲಾಗಿ ಪರ್ಯಾಯ ಬೆಳೆ ಬೆಳೆಯಲು ಸಲಹೆ

ಕೊಪ್ಪಳ ಜುಲೈ 25 2026-27 ನೇ ಸಾಲಿನ ಮುಂಗಾರು ಹಾಗೂ ತಡ ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ಹವಾಮಾನ ವೈಪರೀತ್ಯ ಹಾಗೂ ಮಳೆಯ ಕೊರತೆಯಿಂದಾಗಿ ರೈತರು ಸಾಂಪ್ರದಾಯಿಕ ಬೆಳೆಗಳಿಗೆ ಪರ್ಯಾಯವಾಗಿ ಕಡಿಮೆ ನೀರು ಅಗತ್ಯವಿರುವ ಬೆಳೆಗಳನ್ನು ಬೆಳೆಯಲು ಮುಂದಾಗುವುದು ಅತ್ಯಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ಜಮೀನುಗಳಲ್ಲಿ ಬಿತ್ತನೆ ಮಾಡಿರುವ ಕೆಲವು ಬೆಳೆಗಳು ತೇವಾಂಶದ ಕೊರತೆಯಿಂದ ಬಾಡಲಾರಂಭಿಸಿವೆ. ಆದ್ದರಿಂದ ರೈತರು ಕಡಿಮೆ ಮಳೆಯಲ್ಲಿಯೂ ಬೆಳೆಯಬಹುದಾದ ಹಾಗೂ ಬರ ಪರಿಸ್ಥಿತಿಯನ್ನು ತಡೆದುಕೊಳ್ಳುವ ತೊಗರಿ, ಸಜ್ಜೆ, ಸೂರ್ಯಕಾಂತಿ ಮತ್ತು ಸಿರಿಧಾನ್ಯಗಳಂತಹ ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು.
ಈ ಬೆಳೆಗಳು ಕಡಿಮೆ ಅವಧಿಯಲ್ಲಿ ಉತ್ತಮ ಆದಾಯ ನೀಡುವ ಸಾಮರ್ಥ್ಯ ಹೊಂದಿದ್ದು, ಬೆಳೆ ನಷ್ಟವನ್ನು ಕಡಿಮೆ ಮಾಡಲು ಹಾಗೂ ಮಣ್ಣಿನ ಫಲವತ್ತತೆಯನ್ನು ಕಾಪಾಡಲು ಸಹಕಾರಿಯಾಗುತ್ತವೆ. ರೈತರು ತಮ್ಮ ಜಮೀನಿನ ಮಣ್ಣಿನ ಗುಣಲಕ್ಷಣ, ಲಭ್ಯವಿರುವ ತೇವಾಂಶ ಮತ್ತು ಸ್ಥಳೀಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ಬೆಳೆಗಳನ್ನು ಆಯ್ಕೆ ಮಾಡಬೇಕು. ಇದರಿಂದ ಮಣ್ಣಿನ ಪೋಷಕಾಂಶಗಳ ಸಮತೋಲನ ಕಾಪಾಡಿಕೊಂಡು ಮುಂದಿನ ಬೆಳೆಗಳಿಗೂ ಅನುಕೂಲವಾಗುತ್ತದೆ. ಅಲ್ಲದೆ, ಸ್ಥಳೀಯ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಉತ್ತಮ ಬೇಡಿಕೆ ಮತ್ತು ಬೆಲೆ ದೊರೆಯುವ ಸಾಧ್ಯತೆಯಿದೆ.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಸಜ್ಜೆ, ಮೆಕ್ಕೆಜೋಳ, ತೊಗರಿ, ಅಲಸಂದಿ, ಹತ್ತಿ ಸೇರಿದಂತೆ ಅಧಿಸೂಚಿತ ಬೆಳೆಗಳಿಗೆ ರೈತರು ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಮುಂದಾಗಬೇಕು.
ಹೆಚ್ಚಿನ ಮಾಹಿತಿ, ಪರ್ಯಾಯ ಬೆಳೆಗಳ ಆಯ್ಕೆ ಹಾಗೂ ಅಧಿಸೂಚಿತ ಬೆಳೆಗಳ ವಿವರಗಳಿಗಾಗಿ ರೈತರು ಸಮೀಪದ ಬ್ಯಾಂಕ್ ಶಾಖೆ, ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ