Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ತತ್ವಪದ–ಜನಪದ ಗೀತೆಗಳು ಯುವಜನತೆಗೆ ಸ್ಫೂರ್ತಿ: ಮಲ್ಕಪುರ ಮಹಾದೇವಯ್ಯಸ್ವಾಮಿ ಗವಾಯಿಗಳು

 

ಕೆ.ಸೂಗೂರು, ಆ. 05 ತತ್ವಪದಗಳು ಹಾಗೂ ಜನಪದ ಗೀತೆಗಳು ನಮ್ಮ ಸಂಸ್ಕೃತಿ, ಜೀವನ ಮೌಲ್ಯಗಳು ಮತ್ತು ನೈತಿಕತೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಮೂಲ್ಯ ಪರಂಪರೆಯಾಗಿದ್ದು, ಇವುಗಳನ್ನು ಆಲಿಸುವುದರಿಂದ ಯುವಜನತೆಗೆ ಉತ್ತಮ ಪ್ರೇರಣೆ ದೊರೆಯುತ್ತದೆ ಎಂದು ಹಿರಿಯ ಜನಪದ ಕಲಾವಿದ ಮಲ್ಕಪುರ ಮಹಾದೇವಯ್ಯಸ್ವಾಮಿ ಗವಾಯಿಗಳು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೆ.ಸೂಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ ಪ್ರಯೋಜಿತ ಜನಪದ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನಪದ ಕಲೆಗಳು ಗ್ರಾಮೀಣ ಬದುಕಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುತ್ತವೆ. ಇಂತಹ ಕಾರ್ಯಕ್ರಮಗಳ ಮೂಲಕ ಜನಪದ ಕಲೆಯನ್ನು ಉಳಿಸಿ ಬೆಳೆಸುವ ಜೊತೆಗೆ ಯುವಜನರಲ್ಲಿ ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬಳಿಕ ಮಲ್ಕಪುರ ಮಹಾದೇವಯ್ಯಸ್ವಾಮಿ ಗವಾಯಿಗಳು ಪ್ರಸ್ತುತಪಡಿಸಿದ ತತ್ವಪದಗಳು ಹಾಗೂ ಜನಪದ ಗೀತೆಗಳು ನೆರೆದಿದ್ದ ಶ್ರೋತರನ್ನು ಮಂತ್ರಮುಗ್ಧರನ್ನಾಗಿಸಿದವು. ಅವರ ಗಾಯನಕ್ಕೆ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಲಾವಿದ ಬಿ. ಚಿದಾನಂದಪ್ಪ ಅವರು ಕೂಡ ತತ್ವಪದಗಳು ಮತ್ತು ಜನಪದ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಹಾರ್ಮೋನಿಯಂನಲ್ಲಿ ಮಲ್ಕಪುರ ಮಹಾದೇವಯ್ಯಸ್ವಾಮಿ ಗವಾಯಿಗಳು ಹಾಗೂ ತಬಲದಲ್ಲಿ ವಿರುಪಾಕ್ಷಪ್ಪ ದ್ಯಾವಲಾಪುರ ಉತ್ತಮ ಸಾಥ್ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಆನಂದಪ್ಪ ತಾತ ಹೆರಕಲ್ಲು, ವಿ.ಎಸ್.ಎಸ್.ಎನ್. ಉಪಾಧ್ಯಕ್ಷ ಜಿ. ಗಂಗಾಧರ, ನಿರ್ದೇಶಕ ಕೆ. ಬ್ರಹ್ಮ, ಎಸ್.ಸಿ.ಡಿ.ಎಂ.ಸಿ. ಅಧ್ಯಕ್ಷ ನಾಗರಾಜ, ಮಾಜಿ ಅಧ್ಯಕ್ಷ ಹೆಚ್.ಕೆ. ಬಸವರಾಜ, ಮುಖ್ಯಗುರು ಅರುಣ, ಶಿಕ್ಷಕರಾದ ಬಿ. ಶರಣಪ್ಪ, ವೀರೇಶ್ ಹಾಗೂ ಗ್ರಾಮಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ