Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿಯಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಸಮಾರಂಭ ಸಾಮಾಜಿಕ ಕ್ರಾಂತಿಯ ಹರಿಕಾರ ದೇವರಾಜ ಅರಸು: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

ಬಳ್ಳಾರಿ,ಆ.20:
ರಾಜ್ಯದಲ್ಲಿ ಭೂಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಬುಧವಾರ ಏರ್ಪಡಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇವರಾಜ ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. 1972 ರಿಂದ 1980 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವರು ಕರ್ನಾಟಕದ ಅಪರೂಪದ ರಾಜಕಾರಣಿ. ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಇದ್ದವರು ಎಂದರು.
ಉಳುವವನೆ ಭೂಮಿ ಒಡೆಯ ಕಾಯ್ದೆಯ ಪರಿಣಾಮವಾಗಿ ಚಿಕ್ಕ ಸಮುದಾಯದವರು ಸಹ ಭೂಮಿ ಹೊಂದಲು ಸಾಧ್ಯವಾಗಿದೆ. ಅಂದಿನ ಸಂದರ್ಭದಲ್ಲಿ ಜೀತ ಪದ್ಧತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು. ಸಮಾಜಮುಖಿ ಕಾರ್ಯಗಳತ್ತ ಅವರ ಮನಸು ಸದಾ ತುಡಿಯುತ್ತಿತ್ತು ಎಂದು ಹೇಳಿದರು.
ದೇವರಾಜು ಅರಸು ಅವರು ಹಲವು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೊಳಿಸಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಅನುಕೂಲ ಮಾಡಿಕೊಟ್ಟರು. ದಕ್ಷ ಆಡಳಿತಗಾರ ಆಗಿದ್ದ ಅವರು ಎಲ್.ಜಿ.ಹಾವನೂರು ವರದಿ ಜಾರಿಗೊಳಿಸಿ ಸಣ್ಣ, ಶೋಷಿತ ಸಮುದಾಯಕ್ಕೆ ನೆರವಾದರು ಎಂದರು.
ಇAದಿನ ಯುವ ಪೀಳಿಗೆಯು ಮೊಬೈಲ್ ಗೀಳಿಗೆ ಬೀಳಬಾರದು. ಅದರಿಂದ ಒಳ್ಳೆಯ ವಿಚಾರಗಳನ್ನು ಮಾತ್ರ ಆಸ್ವಾದಿಸಬೇಕು. ಸಮಾಜದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಒಬ್ಬ ಮನುಷ್ಯ ದೇವರಾಗಲು ಸಾಧ್ಯವಿಲ್ಲ. ಅಂದಿನ ಸಮಯದಲ್ಲಿ ದೇವರಾಜು ಅರಸರನ್ನು ಬಡವರು, ದಲಿತರು, ಹಿಂದುಳಿದ ವರ್ಗದವರ ದೇವರೆಂದೇ ಭಾವಿಸಿದ್ದರು. ಯಾರೇ ಆದರೂ ಅಧಿಕಾರವನ್ನು ಒಳ್ಳೆಯ ಕೆಲಸಗಳಿಗಾಗಿಯೇ ವಿನಿಯೋಗಿಸದಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಅರಸು ರೂಪಿಸಿದ ಮಾರ್ಗದಲ್ಲಿಯೇ ರಾಜ್ಯ ಸರ್ಕಾರ ಸಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಸೇರಿದಂತೆ ಸಮ ಸಮಾಜ ನಿರ್ಮಾಣಕ್ಕೆ ನಾಂದಿಹಾಡಿದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಅರಸು ಅವರ ಹಾದಿಯಲ್ಲೇ ಸಾಗುತ್ತಿದ್ದಾರೆ ಎಂದರು.
ಹೊಸಪೇಟೆಯ ಹಂಪಿ ವಿದ್ಯಾರಣ್ಯ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ವೆಂಕಟಗಿರಿ ದಳವಾಯಿ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಹಣ ಮತ್ತು ಅಧಿಕಾರ ಒಂದೇ ಕಡೆ ಇರಬಾರದು, ಇದ್ದರೆ ಅಲ್ಲಿ ಪ್ರಜಾಪ್ರಭುತ್ವ ಸತ್ತಂತೆ ಎಂದು ಅಭಿಪ್ರಾಯಪಟ್ಟವರು ಡಿ.ದೇವರಾಜು ಅರಸರು. ಅವರು ಜಾರಿಗೆ ತಂದ ಹಲವಾರು ಕಾಯ್ದೆ-ಕಾನೂನುಗಳು, ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಂದಿನ ಅಧಿಕಾರಿ ವರ್ಗವು ಪ್ರಮುಖ ಪಾತ್ರ ವಹಿಸಿತ್ತು ಎಂದು ಪ್ರತಿಪಾದಿಸಿದರು.
ಡಿ.ದೇವರಾಜ ಅರಸು ಅವರು ಕರ್ನಾಟಕದ ಪುಣ್ಯ, ದೂರದೃಷ್ಟಿ ಹೊಂದಿದ ಬಹುತ್ವವಾದಿಯಾಗಿದ್ದವರು. ವಿಧಾನಸೌಧದ ಮೆಟ್ಟಿಲು ಹತ್ತದವರನ್ನು ವಿಧಾನಸೌಧಕ್ಕೆ ಬರುವ ಹಾಗೆ ಮಾಡಿದವರು. ದೇವರಾಜು ಅವರ ಕನಸುಗಳನ್ನು ಈಡೇರಿಸುವ ಹೊಣೆಗಾರಿಕೆ ಈಗಿನ ಯುವಕರ ಮೇಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ನಂತರ ‘ಸದ್ಭಾವನಾ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಅತಿಹೆಚ್ಚು ಅಂಕ ಪಡೆದ, ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ., ವಿಶ್ವಕರ್ಮ ಅಭಿವೃದ್ಧಿ ನಿಗಮದ ನಿರ್ದೇಶಕ ಚಂದ್ರಶೇಖರ್, ಮಹಾನಗರ ಪಾಲಿಕೆಯ ಸಭಾನಾಯಕ ಪಿ.ಗಾದೆಪ್ಪ, ಮುಖಂಡರಾದ ಕಲ್ಲುಕಂಭ ಪಂಪಾಪತಿ, ಎಲ್.ಮಾರೆಣ್ಣ, ಗಾದಿಲಿಂಗನಗೌಡ, ಮಂಜುಳಾ ಸೇರಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಇಲಾಖೆಯ ಅಧಿಕಾರಿ-ಸಿಬ್ಬಂದಿ ಹಾಗೂ ವಸತಿನಿಲಯದ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ