Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿಯಲ್ಲಿ ಆಯೋಜಿತವಾಗಿರುವ 88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್





ಬಳ್ಳಾರಿ,ಜು.01

ಬಳ್ಳಾರಿಯಲ್ಲಿ ಜರುಗಲಿರುವ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟವಾಗಿದ್ದು, ಇದನ್ನು ಚಾರಿತ್ರಿಕವಾಗಿಸಲು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.

ಮಂಗಳವಾರದ0ದು, ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಏರ್ಪಡಿಸಿದ್ದ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡಿಗರ ಹೆಮ್ಮೆಯ ಉತ್ಸವವನ್ನು ಚಾರಿತ್ರಿಕವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಇದಕ್ಕೆ ಜಿಲ್ಲಾಡಳಿತವು ಸಂಪೂರ್ಣ ಸಜ್ಜುಗೊಳಿಸಿ ಸರ್ಕಾರದಿಂದ ಬೇಕಾದ ಎಲ್ಲಾ ಸೌಲಭ್ಯ, ನೆರವು ದೊರಕಿಸಿ ಕೊಡಲಾಗುವುದು. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರ ಇನ್ನಷ್ಟು ನಿಕಟವಾಗಿ ಕೆಲಸ ಮಾಡಲಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಮಾತನಾಡಿ, ಇಲ್ಲಿಯವರೆಗೆ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಐದು ಸಮ್ಮೇಳನಗಳು ನಡೆದಿದ್ದು, ಇದು ಆರನೆಯದು ಮತ್ತು ಸ್ವಾತಂತ್ರö್ಯ ನಂತರ ಎರಡನೆಯದಾಗಿದೆ. 68 ವರ್ಷಗಳ ನಂತರ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದು ವಿವರಿಸಿದರು.

ಈಗಾಗಲೇ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್ ಪುರಸ್ಕಾರದ ಮೂಲಕ ಜಾಗತಿಕ ಮನ್ನಣೆ ಪಡೆದಿರುವ ಬಾನು ಮುಷ್ತಾಕ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಇದಕ್ಕೆ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯಿಸಿ, ಈ ಆಯ್ಕೆಯನ್ನು ಮುಕ್ತ ಕಂಠದಿAದ ಶ್ಲಾಘಿಸಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಐದನೇಯ ಮಹಿಳೆ ಮತ್ತು ಮೊದಲ ಅಲ್ಪಸಂಖ್ಯಾತ ಮಹಿಳೆ ಆಗಲಿದ್ದಾರೆ ಎಂಬ ಸಂಗತಿ ಸಂತೋಷ ತರುವಂತಹದ್ದಾಗಿದೆ. ಹೆಚ್ಚಿನದಾಗಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಬಣ್ಣಿಸಿದರು.

ಬಳಿಕ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಇತಿಹಾಸ ವಿವರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು, ಸಮ್ಮೇಳನಗಳಿರುವ ಚಾರಿತ್ರಿಕ ಪರಂಪರೆಗೆ ಒತ್ತು ನೀಡಬೇಕಿದೆ ಎಂದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇದಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 2012ರಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗಿದ್ದ ಸಚಿವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಸಾಂಕೇತಿಕವಾಗಿ ವಿಶೇಷ ಗುರುತಿನ ಚೀಟಿ ನೀಡಲಾಯಿತು.

ಬಳಿಕ ಸಚಿವರು ಮತ್ತು ಬಳ್ಳಾರಿ ಜಿಲ್ಲಾಡಳಿತದ ಅಧಿಕಾರಿಗಳು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಹೊರ ಮತ್ತು ಒಳ ಆವರಣ ವೀಕ್ಷಿಸಿ ಪರಂಪರೆ ಮತ್ತು ಆಧುನಿಕತೆ ಬೆಸೆದಿರುವ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ಎಂ. ಪಟೇಲ್ ಪಾಂಡು, ಮಾಧ್ಯಮ ಸಂಚಾಲಕರಾದ ಎನ್.ಎಸ್.ಶ್ರೀಧರಮೂರ್ತಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ