Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಮಯ ಪ್ರಜ್ಞೆ-ಕರ್ತವ್ಯ ನಿಷ್ಟೆಯಿಂದ ಇಲಾಖೆಗೆ ಹೆಸರು : ರಾಜಕುಮಾರ


ಶಿವಮೊಗ್ಗ ಏ.02: ಸಮಯ ಪ್ರಜ್ಞೆ ಮತ್ತು ನಿಷ್ಟೆಯಿಂದ ಕರ್ತವ್ಯದಲ್ಲಿ ತೊಡಗಿದರೆ ಇಲಾಖೆಗೆ ಉತ್ತಮ ಹೆಸರು ಬರುವುದರೊಂದಿಗೆ ಪ್ರಶಂಸೆ, ಆತ್ಮತೃಪ್ತಿ ಲಭಿಸುತ್ತದೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎ ಎಸ್ ಐ ರಾಜಕುಮಾರ ಹೇಳಿದರು.

ಗುರುವಾರ ಬೆಳಿಗ್ಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ದುಡಿಯುವ ಆರಕ್ಷಕ ಪಡೆಯ ಕರ್ತವ್ಯ ಸೇವೆ ನೆನೆಯುವ ದಿನ ಇದಾಗಿದೆ. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕವನ್ನು ಏಪ್ರಿಲ್ 2 ರಂದು ಮತ್ತು ಕರ್ತವ್ಯ ಮಾಡುತ್ತಲೇ ನಿಧನ ಹೊಂದಿದವರನ್ನು ಸ್ಮರಿಸಲು ಅ.21 ರಂದು ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದ್ದು, ಪೊಲೀಸ್ ಇಲಾಖೆಗೆ ಇವೆರೆಡು ವಿಶೇಷ ದಿನಗಳಾಗಿವೆ.

ಜಿಲ್ಲೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಶಾಂತಿ ಸ್ಥಾಪನೆಗೆ ಕೊಡುಗೆಯನ್ನಿತ್ತ ಪೊಲೀಸ್ ಪಡೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ದಕ್ಷತೆ, ಸಮಯ ಪ್ರಜ್ಞೆಯಿಂದ ದುಡಿದ ಪೊಲೀಸ್ ನೌಕರರ ಕುಂದುಕೊರತೆಗಳನ್ನು ಆಲಿಸಿ ಭದ್ರತೆಯನ್ನು ಒದಗಿಸುವಂತೆ ಇದೇ ವೇಳೆ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿಯೇ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. ಇದರ ಪ್ರಯುಕ್ತವಾಗಿ ಈ ದಿನದಂದು ಪೊಲೀಸ್ ಸಾಂಕೇತಿಕ ಧ್ವಜಗಳನ್ನು ಪೊಲೀಸ್ ಅಧಿಕಾರಿಗಳಿಗೆ, ಆಹ್ವಾನಿತ ಉನ್ನತ ಅಧಿಕಾರಿಗಳಿಗೆ, ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಸಂಗ್ರಹವಾಗಿ ಬಂದ ಹಣದಲ್ಲಿ ಶೇ. 50 ರಷ್ಟು ಹಣವನ್ನು ನಿವೃತ್ತ ಕ್ಷೇಮಾಭಿವೃದ್ದಿ ನಿಧಿಗೆ ಮತ್ತು ಶೇ.50 ರಷ್ಟನ್ನು ಕೇಂದ್ರ ಕಲ್ಯಾಣ ನಿಧಿಗೆ ಜಮಾ ಮಾಡಲಾಗುವುದು ಎಂದರು.

2025 ನೇ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ರೂ. 26,96,870 ಹಣವನ್ನು ಸಂಗ್ರಹಣೆ ಮಾಡಲಾಗಿದೆ. ಇದರಲ್ಲಿ ಶೇ.50 ರಷ್ಟನ್ನು ಕೇಂದ್ರ ಕಲ್ಯಾಣ ನಿಧಿಗೆ ಜಮೆ ಮಾಡಲಾಗಿದೆ. ನಿವೃತ್ತ ಅಧಿಕಾರಿಗಳು ಮರಣ ಹೊಂದಿದಾಗ ಅವರ ಅಂತ್ಯ ಸಂಸ್ಕಾರ ನಿರ್ವಹಣೆಗಾಗಿ ಈ ಕಲ್ಯಾಣ ನಿಧಿಯಿಂದ ರೂ. 10 ಸಾವಿರ ಹಣವನ್ನು ನೀಡಲಾಗುತ್ತಿದೆ. 2025 ನೇ ಸಾಲಿನಲ್ಲಿ 17 ಜನ ಅಧಿಕಾರಿ/ಸಿಬ್ಬಂದಿಗಳಿಗೆ ರೂ. 1,70,000 ಹಣವನ್ನು ಅಂತ್ಯಸAಸ್ಕಾರಕ್ಕೆ ನೀಡಲಾಗಿದೆ.

2025-26 ನೇ ಸಾಲಿನಲ್ಲಿ ಒಟ್ಟು 93 ಜನ ನಿವೃತ್ತ ಅಧಿಕಾರಿ, ಸಿಬ್ಬಂದಿಗಳಿಗೆ ನಿವೃತ ಕಲ್ಯಾಣ ನಿಧಿನಿಯಿಂದ ರೂ.3,29,000 ಗಳನ್ನು ವೈದ್ಯಕೀಯ ಚಿಕಿತ್ಸೆ ವೆಚ್ಚಕ್ಕಾಗಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 70 ವರ್ಷ ಮೇಲ್ಪಟ್ಟ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಹಾಗೂ 2013 ರಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದ ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎ ಎಸ್ ಐ ರಾಜಕುಮಾರರವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ, ಹಿರಿಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ