Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಿನ್ನಡೆ

ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆ ಮುಗಿದು ಇವಿಎಂ ಮತಗಳ ಮೊದಲ ಸುತ್ತಿನ ಎಣಿಕೆ ಆರಂಭವಾಗಿದೆ.

ಬಿ. ವೈ. ರಾಘವೇಂದ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣಕ್ಕಿಳಿದು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಸಮಯ 8.35ರ ಮಾಹಿತಿಯಂತೆ ಶಿವಮೊಗ್ಗದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ ಮುನ್ನಡೆ ಪಡೆದಿದ್ದಾರೆ. ರಾಘವೇಂದ್ರ 687 ಮತಗಳನ್ನು ಪಡೆದಿದ್ದು, 611 ಮತಗಳನ್ನು ಗೀತಾ ಶಿವರಾಜ್ ಕುಮಾರ್ ಪಡೆದಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಅಂಚೆ ಮತಗಳಲ್ಲಿ ಬಿಜೆಪಿ 2252, ಕಾಂಗ್ರೆಸ್ 2018, ಈಶ್ವರಪ್ಪ 260 ಮತಗಳನ್ನು ಪಡೆದಿದ್ದಾರೆ
ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹಾವೇರಿಯಲ್ಲಿ ಪುತ್ರ ಕಾಂತೇಶ್‌ಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡರು. ಮಾಜಿ ಸಿಎಂ ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಟೀಕೆ ಮಾಡಿದರು. ಅಂತಿಮವಾಗಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣ ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆಗೊಂಡರು.
ಶಿವಮೊಗ್ಗದಲ್ಲಿ ಇವಿಎಂ ಮತ ಎಣಿಕೆ ಮೊದಲ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ 22,134. ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ 15,771 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 1092 ಮತಗಳನ್ನು ಪಡೆದಿದ್ದಾರೆ. ಮೊದಲ ಸ್ಥಾನದಲ್ಲಿ ಬಿ. ವೈ. ರಾಘವೇಂದ್ರ ಇದ್ದು, 2ನೇ ಸ್ಥಾನದಲ್ಲಿ ಗೀತಾ ಶಿವರಾಜ್‌ ಕುಮಾರ್ ಇದ್ದಾರೆ. ಈಶ್ವರಪ್ಪ 3ನೇ ಸ್ಥಾನದಲ್ಲಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಬಿ. ವೈ. ರಾಘವೇಂದ್ರ 33,780 ಮತ, ಗೀತಾ ಶಿವರಾಜ್‌ ಕುಮಾರ್ 22,497 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 2145 ಮತಗಳನ್ನು ಪಡೆದಿದ್ದಾರೆ.




 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ