Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಅಧಿಕೃತ ಘೋಷಣೆ ಬಾಕಿ

ಬಳ್ಳಾರಿ, ನವೆಂಬರ್ 23: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣಾ ಕಣದಲ್ಲಿ 6 ಅಭ್ಯರ್ಥಿಗಳಿದ್ದು ಸದ್ಯದ ಮಾಹಿತಿಯಂತೆ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಬಂಗಾರ ಹನುಮಂತ ಮತ್ತು ಕಾಂಗ್ರೆಸ್‌ನ ಇ. ಅನ್ನಪೂರ್ಣ. ಸಂಡೂರು ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

ಶನಿವಾರ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಮಯ 10.17ರ ಮಾಹಿತಿಯಂತೆ ಕಾಂಗ್ರೆಸ್‌ನ ಇ. ಅನ್ನಪೂರ್ಣ 38,373 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಬಂಗಾರ ಹನುಮಂತ 38,340 ಮತಗಳನ್ನು ಪಡೆದ್ದಾರೆ.

ಸಂಡೂರು ಕ್ಷೇತ್ರದಲ್ಲಿ ನವೆಂಬರ್ 13ರಂದು 253 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಶೇ 76.24 ರಷ್ಟು ಮತದಾನವಾಗಿತ್ತು. ಅಂಚೆ ಮತಗಳ ಎಣಿಕೆಯಿಂದಲೂ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದರು.

ಇಗಾಗಲೆ 17ನೇ ಸುತ್ತಿನ ಮತ ಏಣಿಕೆ ಮುಕ್ತಾಯ ಗೋಂಡಿದ್ದು
ಕಾಂಗ್ರೇಸ್ ಮುನ್ನಡೆ ಕಾಯ್ದುಕೋಂಡು ಬಂದಿದೆ
ಇ. ತುಕಾರಾಂ ಸಂಡೂರು ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕರ ಬಳಿ ಉಪ ಚುನಾವಣೆಗೆ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಅವರು ಸಫಲವಾಗಿದ್ದಾರೆ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಅವರೇ ತೆಗೆದುಕೊಂಡಿದ್ದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸಿ ಪ್ರಚಾರವನ್ನು ನಡೆಸಿದ್ದಾರೆ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಸಂಡೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದ್ದರಿಂದ ಸಂಡೂರು ಕದನ ಕುತೂಹಲಕ್ಕೆ ಕಾರಣವಾಗಿದೆ. ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, 6 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿಯ ಬಂಗಾರ ಹನುಮಂತ ಪರವಾಗಿ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯುತ್ತಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.

16ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8881 ಮತಗಳ ಮುನ್ನಡೆ   ಕಾಂಗ್ರೇಸ್- 83368   ಬಿಜೆಪಿ- 74487

ಸಂಡೂರು ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತಗಳು? * ಕಾಂಗ್ರೆಸ್‌ನ ಇ. ಅನ್ನಪೂರ್ಣ - 50692 * ಬಿಜೆಪಿಯ ಬಂಗಾರ ಹನುಮಂತ - 47204 * ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ - 298 * ಪಕ್ಷೇತರ ಎನ್. ವೆಂಕಣ್ಣ - 219 * ಪಕ್ಷೇತರ ಟಿ. ಎರ್ರಿಸ್ವಾಮಿ - 117 * ಪ್ಷೇತರ ಟಿ. ಎಂ. ಮಾರುತಿ - 106 ಮತಗಳು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ