Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಲೋಕಾಯುಕ್ತ ಡಿವೈಎಸ್‍ಪಿ ಅವರಿಂದ ದೂರು ಅರ್ಜಿ ಸ್ವೀಕಾರ ಕಣ್ಣೀರು ಸುರಿಸಿದ ಮನವಿದಾರರು

ಮಡಿಕೇರಿ ಜು.12-ಮಡಿಕೇರಿ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.

ಸಾರ್ವಜನಿಕರೊಬ್ಬರು ಪೊನ್ನಂಪೇಟೆಯಲ್ಲಿ ಐದೂವರೆ ಸೆಂಟ್ ಜಾಗವಿದ್ದು, ಪೌತಿಖಾತೆ ಮಾಡಲು 50 ಸಾವಿರ ರೂ. ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದರು.

ನಾನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ವಯಸ್ಸಾಗಿದೆ. ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ. ಮಗಳ ಮದುವೆ ಮಾಡಬೇಕಿದ್ದು, ತುಂಬಾ ತೊಂದರೆಯಾಗಿದೆ. ಎರಡು ವರ್ಷದಿಂದ ಪೌತಿಖಾತೆ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.


ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ನಿಮ್ಮ ಕೆಲಸ ಕಾಲ ಮಿತಿಯಲ್ಲಿ ಆದ್ಯತೆ ಮೇಲೆ ಮಾಡಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.

ಮತ್ತೊಬ್ಬ ಮಹಾಲಕ್ಷ್ಮಿ ಅವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು.

ಈ ಬಗ್ಗೆ ಪೌರಾಯುಕ್ತರಾದ ವಿಜಯ್ ಅವರು ಹೊಸದಾಗಿ ಖಾತೆ ಆಗಬೇಕಿದೆ. ಶೀಘ್ರ ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಮತ್ತೊಬ್ಬರು ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ವಸಂತ ಪಿ.ಕೆ. ಅವರು ಜಾಗವನ್ನು ದುರಸ್ತಿ ಮಾಡಿಕೊಡುವಂತೆ ಹಲವು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮನವಿ ಮಾಡಿದರೂ ಸಹ ಕೆಲಸಗಳು ಆಗಿಲ್ಲ. ಈ ಸಂಬಂಧ ಕೆಲಸ ಮಾಡಿಸಿಕೊಡುವಂತೆ ಲೋಕಾಯುಕ್ತ ಡಿವೈಎಸ್‍ಪಿ ಅವರಲ್ಲಿ ಮನವಿ ಮಾಡಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‍ಪಿ ಅವರು ಹೇಳಿದರು.

ಮತ್ತೊಬ್ಬ ಮನವಿದಾರರು ಜಾಗದ ಖಾತೆ ಬದಲಾವಣೆ ಮಾಡಿಕೊಡಬೇಕಿದ್ದು, ಈ ಸಂಬಂಧ ಎಷ್ಟೇ ಮನವಿ ಮಾಡಿದರೂ ಸಹ ಇನ್ನೂ ಕೆಲಸವಾಗಿಲ್ಲ ಎಂದು ದೂರಿದರು. ತಮ್ಮ ಕೆಲಸವನ್ನು ಕಾಲಮಿತಿಯಲ್ಲಿ ಮಾಡಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುವುದು ಕಡಿಮೆಯಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಬದಲಾವಣೆಯಾಗುತ್ತಿರುವುದು ಕಂಡುಬರುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಒಳ್ಳೆಯ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಹಕರಿಸಬೇಕು ಎಂದರು. ಕಚೇರಿಯಲ್ಲಿ ಹಾಜರಾತಿ ಬಯೋಮೆಟ್ರಿಕ್ ಅಳವಡಿಸಬೇಕು. ಚಲನವಲನ ವಹಿಯನ್ನು ದಾಖಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಪವನ್‍ಕುಮಾರ್ ಅವರು ಹೇಳಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ