Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನು ಚೌಕಟ್ಟಿನೊಳಗೆ ಸಂವಹನ ಚುನಾವಣಾ ಆಯೋಗದಿಂದ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ


ಬಳ್ಳಾರಿ,ಮಾ.11



ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ ಚೌಕಟ್ಟಿನೊಳಗೆ ಸಂವಹನ ನಡೆಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ನಾಯಕರೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲು ಎಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

ಚುನಾವಣೆಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿ ಚುನಾವಣಾ ನೊಂದಣಾಧಿಕಾರಿಗಳು (ERO), ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು (DEO) ಅಥವಾ ರಾಜ್ಯ ಮಟ್ಟದಲ್ಲಿ ಮುಖ್ಯ ಚುನಾವಣಾಧಿಕಾರಿಗಳು (CEO) ಬಗೆಹರಿಸಲಾಗದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಸಲಹೆಗಳನ್ನು ಕ್ರೂಢೀಕರಿಸಿ 2025 ರ ಏಪ್ರಿಲ್ 30 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸೂಚಿಸಲಾಗಿದೆ.

ಈ ಕುರಿತು ಆಯೋಗದಿಂದ ಇಂದು ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿರುವ ವೈಯಕ್ತಿಕ ಪತ್ರದಲ್ಲಿ, ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ಸದಸ್ಯರೊಂದಿಗೆ ಪರಸ್ಪರ ಅನುಕೂಲಕರ ಸಮಯದಲ್ಲಿ, ಸ್ಥಾಪಿತ ಕಾನೂನಿಗೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಸಂವಾದವನ್ನು ರೂಪಿಸಲು ವೇದಿಕೆಯನ್ನು ಸೃಜಿಸಲಾಗಿದೆ. ಇದಕ್ಕೂ ಮೊದಲು, ಕಳೆದ ವಾರ ನಡೆದ ಭಾರತ ಚುನಾವಣಾ ಆಯೋಗದ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನದಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ನೋಂದಣಾದಿಕಾರಿಗಳು, ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಹನ ನಡೆಸಲು ಸೂಚನೆ ನೀಡಿದ್ದರು.

ಇಂತಹ ಸಭೆಗಳಲ್ಲಿ ಪಡೆದ ಯಾವುದೇ ಸಲಹೆಗಳನ್ನು ಈಗಾಗಲೇ ಕಾನೂನು ಚೌಕಟ್ಟಿನೊಳಗೆ ಕಟ್ಟುನಿಟ್ಟಾಗಿ ಪರಿಹರಿಸಿ, 2025ನೇ ಮಾರ್ಚ್ 31, ರೊಳಗೆ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಿಳಿಸಲಾಗಿತ್ತು. ಅಲ್ಲದೆ, ಚುನಾವಣಾ ಆಯೋಗದ ಈ ವಿನೂತನ ಕಾರ್ಯಕ್ಕೆ ರಾಜಕೀಯ ಪಕ್ಷಗಳೂ ಸಹ ಕೈಜೋಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಲು ಒತ್ತಾಯಿಸಲಾಗಿತ್ತು.

ಭಾರತ ಚುನಾವಣಾ ಆಯೋಗವು, ಸಂವಿಧಾನ ಮತ್ತು ಶಾಸನಬದ್ಧ ಚೌಕಟ್ಟಿನ ಪ್ರಕಾರ, ಚುನಾವಣಾ ಪ್ರಕ್ರಿಯೆಗಳ ಎಲ್ಲಾ ಅಂಶಗಳನ್ನು ಒಳಗೊಂಡು ಗುರುತಿಸಿರುವ 28 ಪಾಲುದಾರರಲ್ಲಿ ರಾಜಕೀಯ ಪಕ್ಷಗಳು ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ. ರಾಜಕೀಯ ಪಕ್ಷಗಳಿಗೆ ಬರೆದ ಪತ್ರದಲ್ಲಿ ಆಯೋಗವು ಜನರ ಪ್ರಾತಿನಿಧ್ಯ ಕಾಯ್ದೆ 1950 ಮತ್ತು 1951; ಮತದಾರರ ನಿಯಮಗಳ ನೋಂದಣಿ, 1960; ಚುನಾವಣಾ ನಿಯಮಗಳ ನಡವಳಿಕೆ, 1961; ಮಾನ್ಯ ಸುಪ್ರೀಂ ಕೋರ್ಟ್ ಮತ್ತು ಭಾರತದ ಚುನಾವಣಾ ಆಯೋಗವು ನೀಡಿದ ಸೂಚನೆಗಳು, ಕೈಪಿಡಿಗಳು ಮತ್ತು ಕೈಪಿಡಿಗಳ ಆದೇಶಗಳು ಭಾರತ ಚುನಾವಣಾ ಆಯೋಗದ ವೆಬ್ ಸೈಟ್‍ನಲ್ಲಿ ಕಾಲಕಾಲಕ್ಕೆ ಲಭ್ಯವಿದೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ವಿಕೇಂದ್ರೀಕೃತ, ಮತ್ತು ಪಾರದರ್ಶಕ ಕಾನೂನು ಚೌಕಟ್ಟನ್ನು ಆಯೋಗವು ಸ್ಥಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ