Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ರೇಷ್ಮೆ ಇಲಾಖೆ: ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ರೈತರಿಗೆ ಸೂಚನೆ



ಕೊಪ್ಪಳ ಜುಲೈ 24: ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ರೇಷ್ಮೆ ಇಲಾಖೆಯ ಸಿಬ್ಬಂದಿಯವರು ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ನೀರಾವರಿ ರೈತರನ್ನು ಸಂಪರ್ಕಿಸಿ ರೇಷ್ಮೆ ಕೃಷಿಯಿಂದಾಗುವ ಅನುಕೂಲಗಳ ಕುರಿತು ಹಾಗೂ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡಿ ರೇಷ್ಮೆ ಕೃಷಿಯ ವಿಸ್ತರಣೆಗೆ ಪ್ರಯತ್ನಿಸುತ್ತಿದ್ದಾರೆ. ರೇಷ್ಮೆ ಇಲಾಖೆಯಲ್ಲಿ ಈ ಕೆಳಕಂಡ ಸರಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಜಿಲ್ಲಾ ಪಂಚಾಯತ್ ಕಾರ್ಯಕ್ರಮ: ಹಿಪ್ಪುನೇರಳೆ ನಾಟಿ ಮಾಡುವ ರೇಷ್ಮೆ ಕೃಷಿಕರಿಗೆ ಸಹಾಯಧನ ನೀಡುವ ಕಾರ್ಯಕ್ರಮದಡಿ ಯಶಸ್ವಿ ಗೂಡು ಉತ್ಪಾದನೆಗೆ ಹಿಪ್ಪುನೇರಳೆ ಗುಣಮಟ್ಟ ಮುಖ್ಯವಾದ ಅಂಶ. ಈ ನಿಟ್ಟಿನಲ್ಲಿ ಹಿಪ್ಪುನೇರಳೆ ತೋಟ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನೀರಾವರಿ ಸೌಲಭ್ಯವಿರುವ ರೈತರನ್ನು ಅಥವಾ ಕೃಷಿಕರನ್ನು ಆಯ್ಕೆ ಮಾಡಿ ಹಿಪ್ಪುನೇರಳೆ ನಾಟಿ ಮಾಡುವ ತೋಟ ವಿಸ್ತರಿಸುವ, ಸಾಂಪ್ರದಾಯಿಕ ಹಿಪ್ಪುನೇರಳೆ ತಳಿ ತೆಗೆದು ಹೆಚ್ಚಿನ ಇಳುವರಿ ನೀಡುವ ಹೊಸ ತಳಿಗೆ ಬದಲಾಯಿಸುವ ರೇಷ್ಮೆ ಕೃಷಿಕರಿಗೆ ಸಹಾಯಧನ ಒದಗಿಸಲಾಗುವುದು. ಒಬ್ಬ ಫಲಾನುಭವಿ ಗರಿಷ್ಠ 2 ಹೆಕ್ಟೆರ್‌ವರೆಗೆ ಸೌಲಭ್ಯ ಪಡೆಯಲು ಅವಕಾಶವಿರುತ್ತದೆ. ಈ ಕಾರ್ಯಕ್ರಮದಡಿಯಲ್ಲಿ 1 ಎಕರೆ ಹೊಸ ಹಿಪ್ಪುನೇರಳೆ ನಾಟಿಗಾಗಿ ಸಾಮಾನ್ಯ ವರ್ಗದ ರೇಷ್ಮೆ ಬೆಳೆಗಾರರಿಗೆ ರೂ.45,000/- ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ರೇಷ್ಮೆ ಬೆಳೆಗಾರರಿಗೆ ರೂ.54,000/- ಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. 1 ಎಕರೆ ಹಿಪ್ಪುನೇರಳೆ ನರ್ಸರಿಗಾಗಿ ಸಾಮಾನ್ಯ ವರ್ಗದ ರೇಷ್ಮೆ ಬೆಳೆಗಾರರಿಗೆ ರೂ.1,12,500/- ಗಳನ್ನು ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ರೇಷ್ಮೆ ಬೆಳೆಗಾರರಿಗೆ ರೂ.1,35,000/-ಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.

ರೇಷ್ಮೆ ಹುಳು ಸೋಂಕು ನಿವಾರಕ ಔಷಧ: ಹಾಲಿ ರೇಷ್ಮೆ ಬೆಳೆಗಾರರಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಸೋಂಕು ನಿವಾರಕ, ಹಾಸಿಗೆ ಸೋಂಕು ನಿವಾರಕ ಹಾಗೂ ಸಸ್ಯ ಸಂವರ್ಧಕಗಳನ್ನು ಉಚಿತವಾಗಿ ನೀಡಲಾಗುವುದು. ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ: ರೇಷ್ಮೆ ಇಲಾಖೆಯಡಿಯಲ್ಲಿ ಹೊಸದಾಗಿ ಹಿಪ್ಪುನೇರಳೆ ನಾಟಿ, ಹಿಪ್ಪುನೇರಳೆ ನರ್ಸರಿ, ಹಿಪ್ಪುನೇರಳೆ ಮರಗಡ್ಡೆ ಕಾರ್ಯಕ್ರಮಗಳನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಆಸಕ್ತ, ನೀರಾವರಿ ಹೊಂದಿರುವ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ತಾಲ್ಲೂಕು ಪಂಚಾಯತ್ ಕಾರ್ಯಕ್ರಮ: ತಾಲೂಕು ಪಂಚಾಯತ್ ಉತ್ಪಾದನೆ ಅಥವಾ ಉತ್ಪಾದಕತೆ ಆಧಾರಿತ ಕಾರ್ಯಕ್ರಮ ಯೋಜನೆಯಡಿ ಮಾರ್ಗಸೂಚಿಗಳನ್ವಯ ಜಿಲ್ಲೆಯ ರೈತರಿಗೆ ರೇಷ್ಮೆ ಕೃಷಿ ಕೈಗೊಳ್ಳಲು ರೇಷ್ಮೆ ಕೃಷಿ ವಿಚಾರ ಸಂಕಿರಣಗಳನ್ನು ಹಾಗೂ ವಸ್ತು ಪ್ರದರ್ಶನಗಳನ್ನು ಪ್ರಚಾರ ಸಾಹಿತ್ಯಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಬಹುದು ಎಂದು ಕೊಪ್ಪಳ ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ