Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಆಹ್ವಾನ





ಬಳ್ಳಾರಿ,ಮೇ 31



ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ, ಹಾಗೂ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಅಹ್ವಾನಿಸಲಾಗಿದೆ.



ಆಸಕ್ತ ಅಭ್ಯರ್ಥಿಗಳು ಕಮಲಾಪುರದ ಲೋಟಸ್ ಮಹಲ್ ಬಳಿಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಜೂ.02 ರಿಂದ ಅರ್ಜಿ ಪಡೆದು, ಭರ್ತಿ ಮಾಡಿ ಜೂ.9 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ತರಬೇತಿ ಪಡೆಯುವ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ರಿಂದ 45 ವರ್ಷದೊಳಗಿರಬೇಕು.



*ತರಬೇತಿಯ ವಿವರ:*



ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ (ಪುಡ್ ಅಂಡ್ ಬೆವರೇಜ್ ಸರ್ವೀಸ್ ಸ್ಟೇವರ್ಡ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ 10 ನೇ ತರಗತಿ ಉತ್ತಿರ್ಣರಾಗಿರಬೇಕು.



ಬಹು ತಿನಿಸು ಕುಕ್ (ಮಲ್ಟಿ ಕ್ಯೂಸೆನ್ ಕುಕ್) : ತರಬೇತಿಯ ಕಾಲಾವಧಿ 5 ತಿಂಗಳು ಹಾಗೂ 8 ನೇ ತರಗತಿ ಉತ್ತೀರ್ಣರಾಗಿರಬೇಕು.



ಕೊಠಡಿ ಪರಿಚಾರಕ (ರೂಂ ಅಟೆಂಡಂಟ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ ಐದನೇ ತರಗತಿ ಉತ್ತೀರ್ಣರಾಗಿರಬೇಕು.



ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ಖಾತರಿಯಾಗಿದೆ.



ತರಬೇತಿ ಪಡೆಯುವ ವೇಳೆ ರೂ.2000/- ರಂತೆ ಮಾಹೆಯಾನ ಸ್ಟೈಫಂಡ್ ನೀಡಲಾಗುವುದು.



ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಸಮವಸ್ತ್ರ ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ತರಬೇತಿ ಸಹ ನೀಡಲಾಗುವುದು.



ಐಹೆಚ್‌ಎಂ ಬೆಂಗಳೂರು ಮತ್ತು ಎಫ್‌ಸಿಐ ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಪ್ರಮಾಣ ಪತ್ರಗಳನ್ನು ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.



ಹೆಚ್ಚಿನ ಮಾಹಿತಿಗಾಗಿ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿ ಅಥವಾ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ