Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ತರಬೇತಿ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ



ಕೊಪ್ಪಳ ಆಗಸ್ಟ್ 05  ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆ ವತಿಯಿಂದ 42 ದಿನಗಳ ಕಾಲ ಹಮ್ಮಿಕೊಂಡಿರು ಸಾಮಾನ್ಯ ಬುನಾದಿ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಗ್ರುಫ್ ಸಿ ವೃಂದದ ಲಿಪಿಕ ಪ್ರಶಿಕ್ಷಾರ್ಥಿಗಳು ಪಡೆದುಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಅವರು ಮಂಗಳವಾರ ಕೊಪ್ಪಳ ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಇತ್ತಿಚೆಗೆ ಆಯ್ಕೆಯಾದ ಗ್ರೂಫ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸಾಮಾನ್ಯ ಬುನಾದಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಡಳಿತಾತ್ಮಕವಾಗಿ ಹೆಚ್ಚಿನ ಸುಧಾರಣೆಯಾಗಬೇಕಾದರೆ ತಮ್ಮ ತಮ್ಮ ಕಛೇರಿ ವಿಷಯಗಳ ಕುರಿತು ಚೆನ್ನಾಗಿ ತಿಳಿದುಕೊಳ್ಳಬೇಕು ಮತ್ತು ಯಾವುದೆ ಫೈಲಿಗೆ ಸಹಿ ಮಾಡಬೇಕಾದರೆ ಅದನ್ನು ಓದಿ ತಿಳಿದುಕೊಂಡೆ ಮಾಡಬೇಕು. ಗೊತ್ತಿಲ್ಲದ ವಿಷಯಗಳ ಕುರಿತು ಚರ್ಚೆಮಾಡಿ ತಿಳಿದುಕೊಳ್ಳಬೇಕು. 42 ದಿನಗಳ ತರಬೇತಿ ಅವಧಿಯಲ್ಲಿ ತಮ್ಮ ಇಲಾಖೆಗಳ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಹೋಗಬೇಕೆಂದು ಹೇಳಿದರು.

ಈ ಹಿಂದೆ ಹಲವಾರು ಜನರು ತರಬೇತಿ ಪಡೆಯದೆ ಕೆಲಸ ಮಾಡಿದವರು ಇದ್ದಾರೆ ತಾವು ತರಬೇತಿ ಪಡೆಯುತ್ತಿರುವ ಸುದೈವಿಗಳು ಹಾಗಾಗಿ ಈ ತರಬೇತಿಯ ಲಾಭ ಪಡೆಯಬೇಕು. ಪ್ರತಿ ಸಲ ಜಿಲ್ಲಾ ತರಬೇತಿ ಸಂಸ್ಥೆಯಿಂದ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಕೆಲವೊಂದು ಇಲಾಖೆಯವರು ತಮ್ಮ ಸಿಬ್ಬಂದಿಗಳನ್ನು ಕಳಿಸುತ್ತಿರಲಿಲ್ಲ ಹಾಗಾಗಿ ಅವರನ್ನು ಕಳಿಸಲು ಆಯಾ ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ತರಬೇತಿ ವೃತ್ತಿ ಜೀವನದಲ್ಲಿ ಅತ್ಯವಶ್ಯಕ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನವರ್ ಮಾತನಾಡಿ ತರಬೇತಿ ನಮ್ಮ ವೃತ್ತಿ ಜೀವನದ ಕೊನೆ ಕ್ಷಣದವರೆಗೆ ಬೇಕು. ವೃತ್ತಿ ಜೀವನದಲ್ಲಿ ನಾವು ಮೇಲೆ ಬರಬೇಕಾದರೆ ಕೌಶಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಬೇಸಿಕ್ ಗೊತ್ತಿಲ್ಲದಿದ್ದರೆ ನಾವು ಯಾವ ತಂತ್ರಾಂಶ ಕಲಿತರು ಅದು ತಲೆಯಲ್ಲಿ ಹೋಗುವುದಿಲ್ಲ ಹಾಗಾಗಿ ಪ್ರಶಿಕ್ಷಾರ್ಥಿಗಳಿಗೆ ಬುನಾದಿ ತರಬೇತಿ ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ವತಿಯಿಂದ ಇತ್ತಿಚೆಗೆ ನೇಮಕಗೊಂಡಿರುವ ಗ್ರುಫ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳಿಗೆ ಆಗಸ್ಟ್. 5 ರಿಂದ ಸೆಪ್ಟೆಂಬರ್ 30 ರವರೆಗೆ 42 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸರಕಾರಿ ನೌಕರರು ತಮ್ಮ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಹೇಗೆ ಮಾಡಬೇಕು. ಅಧಿಕಾರಿಗಳೊಂದಿಗೆ ಹೇಗೆ ಕೆಲಸ ಮಾಡಬೇಕು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು ಎನ್ನುವ ಹಲವಾರು ವಿಷಯಗಳ ಕುರಿತು ಸಂಪನ್ಮೂಲ ವ್ಯಕಿಗಳನ್ನು ಕರೆದು ಪ್ರಶಿಕ್ಷಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತದೆ ಇದು ನಾನು ಬಂದಾಗಿನಿಂದ ನಾಲ್ಕನೇ ತರಬೇತಿ ಮಾಡುತ್ತಿದ್ದೆವೆ. ಕಲಿಕೆ ಹುಟ್ಟಿನಿಂದ ಸಾಯುವವರೆಗೆ ನಿರಂತರವಾಗಿ ಎಂದು ಹೇಳಿದರು.

ಕೃಷ್ಣಮೂರ್ತಿ ದೇಸಾಯಿ, ಮೈಲಾರ್ ರಾವ್ ಕುಲಕರ್ಣಿ, ಲಾಯಕ್ ಅಲಿ, ಎಂ.ಗುರುರಾಜ ಅವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ಗ್ರೇಡ್-2 ತಹಶಿಲ್ದಾರ ಗವಿಸಿದ್ದಪ್ಪ ಮಣ್ಣೂರ. ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ಸುರೇಶ ಜಿ. ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಬೋಧಕರಾದ ಶ್ರೀ ಧರ್ ಮತ್ತು ನರ್ಮದಾ ಸೇರಿದಂತೆ ಗ್ರುಪ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ