Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೃಷ್ಟಿಹೀನರ ಪುನರ್ವಸತಿ' ಕುರಿತು ಯುಜಿ ಡಿಪ್ಲೊಮಾ ಕೋರ್ಸ್ ಆರಂಭ

ಬಳ್ಳಾರಿ,ಜೂ.24
ಪಿಯುಸಿ ಉತ್ತೀರ್ಣರಾಗಿ ಸಮಾಜಸೇವೆಯೊಂದಿಗೆ ಉತ್ತಮ ಉದ್ಯೋಗಾವಕಾಶ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ‘ದಿ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೆöÊಂಡ್' ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ “ದೃಷ್ಟಿಹೀನರ ಪುನರ್ವಸತಿ” ವಿಷಯದಲ್ಲಿ ಪ್ರಥಮ ಬಾರಿಗೆ ಒಂದು ವರ್ಷದ ವಿಶೇಷ ಯುಜಿ ಡಿಪ್ಲೊಮಾ ಕೋರ್ಸ್ ಅನ್ನು ಪ್ರಾರಂಭಿಸಲಾಗುತ್ತಿದೆ.
ಸ್ವಯAಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಹಾಗೂ ವಿಕಲಚೇತನರ ಸಬಲೀಕರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವವರಿಗೆ ಈ ತರಬೇತಿ ಕಾರ್ಯಕ್ರಮ ಉಪಯೋಗವಾಗಲಿದೆ.
ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ವತಿಯಿಂದ ಡಿಪ್ಲೊಮಾ ಪ್ರಮಾಣಪತ್ರ ನೀಡಲಾಗುತ್ತದೆ.
ಕೋರ್ಸ್ ಮುಗಿದ ನಂತರ ಅಭ್ಯರ್ಥಿಗಳಿಗೆ ರೂ.15,000/- ಶಿಷ್ಯವೇತನದೊಂದಿಗೆ ರಾಷ್ಟಿçÃಯ ಅಂಧರ ಸಂಘದ ಸಂಸ್ಥೆಯಲ್ಲಿ ಒಂದು ವರ್ಷದ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿಯ ನಂತರದ ವರ್ಷದಿಂದ ಪ್ರತಿ ತಿಂಗಳು ರೂ.23,000/- ವೇತನದೊಂದಿಗೆ ರಾಷ್ಟಿçÃಯ ಅಂಧರ ಸಂಘ ಅಥವಾ ಇತರೆ ಪ್ರಮುಖ ಎನ್ಜಿಒಗಳಲ್ಲಿ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ ಇರುತ್ತದೆ.
ಎನ್ಜಿಒಗಳು, ಸಮಗ್ರ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರಗಳು, ಸರ್ಕಾರ ಹಾಗೂ ಸಿ.ಎಸ್.ಆರ್ ಬೆಂಬಲಿತ ವಿಕಲಚೇತನ ಸಬಲೀಕರಣ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಲು ಇದು ಉತ್ತಮ ವೇದಿಕೆಯಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅಧಿಕೃತ ವೆಬ್‌ಸೈಟ್: www.bcu.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 04 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9538653180, 6363891284, 9611924211 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ