Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಯೂರಿಯಾ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ: ಜಂಟಿ ಕೃಷಿ ನಿರ್ದೇಶಕರು



ಕೊಪ್ಪಳ ಜುಲೈ 24 : ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ರಿಂದ ಜುಲೈವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 31,252 ಮೆಟ್ರಿಕ್ ಟನ್ ಆಗಿದ್ದು, ಈ ವಿರುದ್ಧ 33,459 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಹೊಂದಲಾಗಿದೆ. ಇದರಲ್ಲಿ 28,757 ಮೆಟ್ರಿಕ್ ಟನ್ ರಸಗೊಬ್ಬರವನ್ನು ವಿತರಣೆ ಮಾಡಲಾಗಿದೆ. ಇನ್ನುಳಿದ 4,702 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ದಾಸ್ತಾನು ಲಭ್ಯವಿದೆ.

ಈ ವಾರ National Fertilizers Limited (NFL), Coromandel International Limited (CIL) ಹಾಗೂ Kribhco Fertilizer Limited ಕಡೆಯಿಂದ ಒಟ್ಟು 3,136.73 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಪೂರೈಕೆ ಮಾಡಲಾಗಿದೆ. ಈ ಪೂರೈಕೆಯಿಂದ ಕೊಪ್ಪಳ ತಾಲ್ಲೂಕಿಗೆ 629.03 ಟನ್, ಕುಷ್ಟಗಿ ತಾಲ್ಲೂಕಿಗೆ 269.95 ಟನ್, ಯಲಬುರ್ಗಾ ತಾಲ್ಲೂಕಿಗೆ 421.70 ಟನ್, ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ಭಾಗಗಳಿಗೆ 1,816.05 ಟನ್ ರಸಗೊಬ್ಬರವನ್ನು ಪೂರೈಸಲಾಗಿದೆ. ಯೂರಿಯಾ ರಸಗೊಬ್ಬರದ ಪೂರೈಕೆ ಹಂತ ಹಂತವಾಗಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ 5,000 ಮೆಟ್ರಿಕ್ ಟನ್ SPIC, MFL ಮತ್ತು RCF ಕಂಪನಿಗಳಿಂದ ಇನ್ನೂ ಹೆಚ್ಚಿನ ಪೂರೈಕೆ ನಿರೀಕ್ಷಿಸಲಾಗಿದೆ.

ರೈತರು ಯಾವುದೇ ಆತಂಕಕ್ಕೊಳಗಾಗದೇ, ಯೂರಿಯಾ ರಸಗೊಬ್ಬರದ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸುವುದರಿಂದ ನೀರು ಮತ್ತು ಮಣ್ಣಿನ ಸಂರಕ್ಷಣೆಯೂ ಸಾಧ್ಯ. ಅಲ್ಲದೇ, ರೈತರು ರಸಗೊಬ್ಬರ ಹಾಗೂ ಇತರೆ ಕೃಷಿ ಪರಿಕರಗಳನ್ನು ಖರೀದಿಸುವಾಗ ಮಾರಾಟಗಾರರು ಖರೀದಿ ಬಿಲ್ ನೀಡದೇ ಇರುವುದು ಅಥವಾ ಮೌಲ್ಯಕ್ಕಿಂತ ಹೆಚ್ಚು ದರದಲ್ಲಿ ಮಾರಾಟ ಮಾಡುವುದನ್ನು ಕಂಡುಬAದಲ್ಲಿ, ತಕ್ಷಣವೇ ಸಹಾಯಕ ಕೃಷಿ ನಿರ್ದೇಶಕರಾದ ಜೀವನಸಾಬ, ಕೊಪ್ಪಳ: 8277922143, ನಾಗರಾಜ ಕಾತರಕಿ, ಕುಷ್ಟಗಿ: 8277922109, ಪ್ರಮೋದ ತುಂಬಾಳ, ಯಲಬುರ್ಗಾ: 8277922107, ಸಂತೋಷ ಪಟ್ಟದಕಲ್, ಗಂಗಾವತಿ: 8277922106, ಸುನೀಲ್ ಕುಮಾರ ಎಂ. ಟಿ., (ಜಾರಿದಳ) ಕೊಪ್ಪಳ: 8277932117 ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ