Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ

ರಾಯಚೂರು,ಜೂ.06(ಕ.ವಾ):- ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು, ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಪ್ರಧಾನ ಪೋಷಕಾಂಶಗಳೆAದು, ಕಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬ್ಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆAದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ. ಮಣ್ಣಿನಿಂದ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊAದಿಗೆ ಬಳಸಬಹುದಾಗಿದೆ. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ : ರಂಜಕ : ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಷ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಗಿರುತ್ತದೆ. ಅಲ್ಲದೆ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 2020:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನು ಸಹ ಬಳಸಬಹುದಾಗಿದೆ. ಈ ಬಗ್ಗೆ ಇಲಾಖೆಯ ವಿವಿಧ ಹಂತಗಳಲ್ಲಿ ಜರಗುವ ತರಬೇತಿಗಳು, ಕಾರ್ಯಾಗಾರಗಳು ಹಾಗೂ ಅಭಿಯಾನಗಳಲ್ಲಿ ಕಡ್ಡಾಯವಾಗಿ ರೈತರಿಗೆ ಹಾಗೂ ರಸಗೊಬ್ಬರ ಮಾರಾಟಗಾರಿರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವುದು. ಮಾರಾಟಗಾರರು ರಸಗೊಬ್ಬರಗಳನ್ನು ಮಾರಾಟ ಮಾಡುವಾಗ ಪೊಟ್ಯಾಷ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಉಪಯುಕ್ತತೆ ಬಗ್ಗೆ, ರೈತರಿಗೆ ತಿಳಿಸಲು ಕ್ರಮವಹಿಸುವಂತೆ ಸೂಚನೆಗಳನ್ನು ನೀಡುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ