Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ


ಬಳ್ಳಾರಿ,ಡಿ.26



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜ.01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.


ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕೂಡ್ಲಿಗಿ ತಾಲ್ಲೂಕಿನ ಖಾನಹೊಸಳ್ಳಿಯ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ವೃಷಭೇಂದ್ರಚಾರ್ಯ ಅರ್ಕಸಾಲಿ ಅವರು ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರಿನ ರಾಜು ತಂಡದಿoದ ಭಕ್ತಿ ಸಂಗೀತ ಇರಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ