Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ರಾಯಚೂರು ಜಿಲ್ಲೆಗೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಭೇಟಿ ===   ಎಲ್ಲ ಅಂಗನವಾಡಿಗಳಲ್ಲೂ ಶಾಲಾ ಪೂರ್ವ ಚಟುವಟಿಕೆಗಳು ಅತ್ಯುತ್ತಮವಾಗಿ ನಡೆಯಲಿ: ಪ್ರಿತಮ್ ಬಿ.ಯಶವಂತ ಸಲಹೆ


===
ರಾಯಚೂರು ನವೆಂಬರ್ 20 : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಪ್ರಿತಮ್ ಬಿ.ಯಶವಂತ ಅವರು ರಾಯಚೂರು ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿ, ಅಂಗನವಾಡಿಗಳಲ್ಲಿನ ಶೈಕ್ಷಣಿಕ ಸ್ಥಿತಿಗತಿ, ಐಸಿಡಿಎಸ್ ಮತ್ತು ಇತರೆ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಮೊದಲಿಗೆ ರಾಯಚೂರು ಗ್ರಾಮೀಣ ಪ್ರದೇಶದ ಎಲೆಬಿಚ್ಯಾಲಿ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ನೀಡುವ ಸೌಕರ್ಯಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ಪಡೆದುಕೊಂಡು, ಕೇಂದ್ರದಲ್ಲಿ ಸಿದ್ಧಪಡಿಸಿದ್ದ ಆಹಾರದ ಗುಣಮಟ್ಟ ಪರಿಶೀಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಲಾಪೂರ್ವ ಶಿಕ್ಷಣದ ಬಗ್ಗೆ ತರಬೇತಿ ನೀಡಲಾಗಿದೆಯೇ ಎಂದು ಪ್ರಶ್ನಿಸಿ ಅಂಗನವಾಡಿ ಕೇಂದ್ರಗಳಲ್ಲಿನ ಇಸಿಸಿ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು. ಅಂಗನವಾಡಿಗಳಲ್ಲಿನ 5 ರಿಂದ 6 ವರ್ಷದ ಮಕ್ಕಳಿಗೆ ಚಿತ್ರಕಲೆ ಬಿಡಿಸುವುದು, ಅಕ್ಷರ ಅಭ್ಯಾಸ ಮಾಡಿಸುವುದು ಮತ್ತು ವಾರದ ಚಟುವಟಿಕೆಗಳನ್ನು ನಡೆಸುವ ಪುಸ್ತಕಗಳನ್ನು ಪರಿಶೀಲಿಸಿ ಶಾಲಾ ಪೂರ್ವ ಶಿಕ್ಷಣದ ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಂಗನವಾಡಿ ಕಟ್ಟಡವನ್ನು ಯಾವ ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ? ಘಟಕದ ವೆಚ್ಚ ಎಷ್ಟು? ಯಾವ ಯೋಜನೆಯಲ್ಲಿ ನಿರ್ಮಾಣ ಮಾಡಲಾಗಿದೆ? ಎಂದು ಕೇಳಿ ಕಟ್ಟಡದ ಗುಣಮಟ್ಟ ಹಾಗೂ ಅಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.
ಬಳಿಕ ಅವರು ಹಂಚಿನಾಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು. ಮಕ್ಕಳಿಗೆ ನೀಡುವ ಮಿಲ್ಲೆಟ್ ಲಾಡುವಿನ ಗುಣಮಟ್ಟ ಮತ್ತು ಅದರ ರುಚಿಯನ್ನು ಪರಿಶೀಲಿಸಿದರು. ಕೇಂದ್ರದಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿರುವುದನ್ನು ಗಮನಿಸಿ ಇದು ಉತ್ತಮವಾದ ಬೆಳವಣಿಗೆ ಆಗಿದ್ದು, ಈ ರೀತಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸೋಲಾರ್ ವ್ಯವಸ್ಥೆ ಮಾಡಿಸುವ ಬಗ್ಗೆ ಗಮನ ಹರಿಸಿ ಎಂದು ತಿಳಿಸಿದರು.
ಬಳಿಕ ರಾಯಚೂರು ನಗರ ಯೋಜನೆಯ ಸಿಯಾತಲಾಬ್ ಬಡಾವಣೆಯ 02 ಅಂಗನವಾಡಿ ಕೇಂದ್ರಗಳಿಗೆ ಸಹ ದಿಢೀರ್ ಭೇಟಿ ನೀಡಿದರು. ಅಂಗನವಾಡಿ ಕೇಂದ್ರವು ಬಾಡಿಗೆ ಕಟ್ಟಡದಲ್ಲಿರುವುದನ್ನು ಗಮನಿಸಿ, ಈ ಕಟ್ಟಡಕ್ಕೆ ಎಷ್ಟು ಬಾಡಿಗೆ ನೀಡಲು ಅವಕಾಶವಿದೆ ಎಂದು ಕೇಳಿದರು. ಎರಡೂ ಕೇಂದ್ರಗಳಲ್ಲಿನ ಆಹಾರ ಧಾನ್ಯಗಳ ಬಗ್ಗೆ ಪರಿಶೀಲಿಸಿದರು. ಅಪೌಷ್ಟಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಹೆಚ್ಚಿನ ಪೌಷ್ಟಿಕಾಂಶ ಹೊಂದಿರುವ ಆಹಾರವನ್ನು ಮಕ್ಕಳಿಗೆ ನೀಡಲು ಹಾಗೂ ಚಿಕಿತ್ಸೆಗಾಗಿ ಮಕ್ಕಳನ್ನು ಎನ್.ಆರ್.ಸಿ ಕೇಂದ್ರಕ್ಕೆ ಕಳುಹಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. ಅಂಗನವಾಡಿ ಮಕ್ಕಳ ಶಾಲಾಪೂರ್ವ ಚಟುವಟಿಕೆಗಳ ಬಗ್ಗೆ ಕೇಳಿದರು. ಅಂಗನವಾಡಿಗಳಲ್ಲಿ ಪ್ರತಿ ದಿನ ನಡೆಯುವ ಚಟುವಟಿಕೆಗಳಿಗೆ ಸಂಬoಧಿಸಿದoತೆ ಮಕ್ಕಳು ಹಾಡಿನ ಮೂಲಕ ಪ್ರದರ್ಶಿಸಿದ್ದನ್ನು ಗಮನಿಸಿ ಸಂತಷ ವ್ಯಕ್ತಪಡಿಸಿದರು. ಕ್ರಿಯಾಶೀಲರಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದಿಸಿದರು. ನಮ್ಮ ದೇಶದಲ್ಲಿ ಈ ರೀತಿಯಾಗಿ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಣೆಯಾಗಬೇಕಿದೆ ಎಂದು ಸಲಹೆ ಮಾಡಿದರು.
ಬಳಿಕ ಅವರು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯ ರಾಯಚೂರು ವಿಜ್ಞಾನ ಸಂಶೋಧನಾ ಕೇಂದ್ರ ರಿಮ್ಸ್ ಆಸ್ಪತ್ರೆಯಲ್ಲಿ ನಡೆಯುವ ಒನ್ ಸ್ಟಾಪ್ ಸೆಂಟರ್‌ಗೆ ಭೇಟಿ ನೀಡಿದರು. ಹೊಸದಾಗಿ ನಿರ್ಮಿಸಿದ ಕಟ್ಟಡವನ್ನು ಪರಿಶೀಲಿಸಿ ಕಟ್ಟಡದ ಹೊರಭಾಗದ ಗೋಡೆಯ ಮೇಲೆ ಮಹಿಳೆಯರ ಕಾರ್ಯಕ್ರಮಗಳ ಬಗ್ಗೆ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಪ್ರಚಾರದ ಬರೆಹ ಬರೆಯಿಸಲು ಸೂಚನೆ ನೀಡಿದರು.
ಸಖಿ ಒನ್ ಸ್ಟಾಪ್ ಸೆಂಟರ್ ಡ್ಯಾಶ್ ಬೋರ್ಡ್ ವೀಕ್ಷಿಸಿ, ಪ್ರತಿದಿನ ಅಪಡೇಟ್ ಮಾಡಲು ತಿಳಿಸಿದರು. 05 ವರ್ಷಗಳಲ್ಲಿ ದಾಖಲಾದ ಕೆಸ್‌ಗಳ ಬಗ್ಗೆ ಪರಿಶೀಲಿಸಿ, ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 08 ಜನ ಸಿಬ್ಬಂದಿಯ ಮಾಹಿತಿ ಪಡೆದುಕೊಂಡರು.
ಸಹಾಯಕ್ಕಾಗಿ ಬರುವ ಸಂಕಟದಲ್ಲಿರುವ ಮಹಿಳೆಯರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಮತ್ತು ಅಗತ್ಯ ಕಾನೂನು ನೇರವು ನೀಡಲು ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು. ಆಡಳಿತಾಧಿಕಾರಿಗಳು, ಮಹಿಳೆಯರಿಗೆ ಉತ್ತಮ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಲು ಮತ್ತು ಮೇಲ್ವಿಚಾರಣೆ ಮಾಡಬೇಕು ಎಂದು ತಿಳಿಸಿದರು. ಕೆಲಸದಲ್ಲಿ ಯಾವುದೇ ರೀತಿಯ ನಿರ್ಲಕ್ಷತೆಯನ್ನು ಸಹಿಸಲಾಗುವುದಿಲ್ಲ ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬಳಿಕ ಎಂ.ಎಸ್.ಪಿ.ಟಿ.ಸಿ ಕೇಂದ್ರಕ್ಕೆ ಭೇಟಿ ನೀಡಿದರು. ಕೇಂದ್ರದಲ್ಲಿದ್ದ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು. ಆಹಾರ ಖರೀದಿಸುವ ಪ್ರಕ್ರಿಯೆಯ ಬಗ್ಗೆ ತಿಳಿದುಕೊಂಡರು. ಆಹಾರದ ಪೊಟ್ಟಣಗಳ ಸಿದ್ದಪಡಿಸುವಿಕೆ ಮತ್ತು ಪೊಟ್ಟಣದಲ್ಲಿ ಇರಿಸಿದ ಆಹಾರ ಪದಾರ್ಥಗಳ ಸರಿಯಾದ ಪ್ರಮಾಣದ ತೂಕದ ಬಗ್ಗೆ ಎಂ.ಎಸ್.ಪಿ.ಟಿ.ಸಿ ಯ ಸದಸ್ಯರೊಂದಿಗೆ ಚರ್ಚಿಸಿದರು. ನಿಮಗೆ ಸರಿಯಾದ ಸಮಯಕ್ಕೆ ಗೌರವಧನ ಸಿಗುತ್ತಿದೆಯೇ ಎಂದು ಸಿಬ್ವಂದಿಗೆ ಕೇಳಿದರು. ಎಂ.ಎಸ್.ಪಿ.ಟಿ.ಸಿಯಲ್ಲಿದ್ದ ಯಂತ್ರಗಳ ಬಗ್ಗೆ ಇದೆ ವೇಳೆ ಪರಿಶೀಲಿಸಿದರು.
ಬಳಿಕ, ನಗರದ ಸ್ವಾಧಾರ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡ ನಿರ್ಮಾಣ, ವಿನ್ಯಾಸದ ಬಗ್ಗೆ ಮಹಿಳಾ ಮಂಡಲದ ಸದಸ್ಯರಿಗೆ ವಿಚಾರಿಸಿದರು. ಸ್ವಾಧಾರ ಕೇಂದ್ರದಲ್ಲಿ ದಾಖಲಾಗಿರುವ ಸಂಕಷ್ಟ ಮಹಿಳೆಯರನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ಮತ್ತು ಅವರಿಗೆ ನೀಡಲಾಗುವ ಊಟೋಪಚಾರ, ದಿನನಿತ್ಯದ ಬಳಕೆ ಸಾಮಗ್ರಿಗಳ ಬಗ್ಗೆ ಹಾಗೂ ಇನ್ನಿತರ ಸೌಲಭ್ಯಗಳನ್ನು ಸರಿಯಾಗಿ ದೊರೆಯುತ್ತಿದೆಯೇ ಎಂದು ವಿಚಾರಿಸಿದರು. ಸ್ವಾಧಾರ ಕೇಂದ್ರವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಲು ಮತ್ತು ಮಹಿಳೆಯರಿಗೆ ಅಗತ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಸಂಸ್ಥೆಯು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸ್ವಾಧಾರ ಕೇಂದ್ರದಿAದ ಹೊರಗಡೆ ಹೋದ ಮೇಲೆ ಆರ್ಥಿಕವಾಗಿ ಸ್ವಾವಲಂಭಿಯಾಗಿ ಬದುಕಲು ಅಗತ್ಯವಿರುವ ತರಬೇತಿ ಪಡೆದುಕೊಳ್ಳಲು, ಇನ್ನು ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಇಚ್ಚೆಯಿದ್ದಲ್ಲಿ ಶಿಕ್ಷಣದ ಬಗ್ಗೆ ಗಮನ ಹರಿಸಲು ಮತ್ತು ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಲು ಪ್ರಯತ್ನಿಸಬೇಕೆಂದು ಇದೆ ವೇಳೆ ಮಹಿಳೆಯರಿಗೆ ಪ್ರಿತಮ್ ಬಿ.ಯಶವಂತ ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಯಚೂರು ಜಿಲ್ಲಾ ಉಪ ನಿರ್ದೇಶಕರಾದ ನವೀನಕುಮಾರ ಹಾಗೂ ಇನ್ನೀತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ