ಕೊಪ್ಪಳ ನವೆಂಬರ್ 07ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನವೆಂಬರ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದೆ.
ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಗೆಸ್ಟ್ ಲೆಕ್ಚರರ್ ಹುದ್ದೆಗಳಿಗೆ ಸಂದರ್ಶನ ನಡೆಯಲಿದ್ದು, ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಬಿಇ(ಇ&ಇ), ಬಿಇ(ಮೆಕ್ಯಾನಿಕಲ್) ಮತ್ತು ಬಿಇ(ಇ&ಸಿ) ವಿದ್ಯಾರ್ಹತೆ ಹೊಂದಿದ ಹಾಗೂ ಬೋಧನಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. 22 ವರ್ಷ ಮೇಲ್ಪಟ್ಟ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

