Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು


ಬಳ್ಳಾರಿ,ಜು.18



ಪ್ರಸ್ತಕ ಸಾಲಿನಲ್ಲಿ ಮುಂಗಾರು-ಹಂಗಾಮಿನಲ್ಲಿ ಮಳೆ ತೀವ್ರತೆ ಹೆಚ್ಚು ಇರುವುದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳಹರಿವು ಪ್ರಾರಂಭವಾಗಿದೆ. ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ ಸುಮಾರು 46.80 ಟಿ.ಎಂ.ಸಿ ನೀರು ಸಂಗ್ರಹಣೆಯಾಗಿದ್ದು, ಒಳಹರಿವು ಸುಮಾರು 1 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಪ್ರಯುಕ್ತ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳೊಡನೆ ಚರ್ಚಿಸಿ, ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ ಅವರು ಸೂಚನೆ ನೀಡಿದ್ದಾರೆ.

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

*ವೇಳಾಪಟ್ಟಿ:*

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಜು.19 ರಿಂದ ಸರಾಸರಿ 4100 ಕ್ಯೂಸೆಕ್ಸ್‍ನಂತೆ ನೀರು ಹರಿಸಲಾಗುವುದು.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ: ಜು.19 ರಿಂದ ಆ.03 ರಿಂದ ಸರಾಸರಿ 25 ಕ್ಯೂಸೆಕ್ಸ್‍ನಂತೆ ನೀರು ಹರಿಸಲಾಗುವುದು..

ತುಂಗಭದ್ರಾ ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆ: ಜು.19 ರಿಂದ ಸರಾಸರಿ 650 ಕ್ಯೂಸೆಕ್ಸ್‍ನಂತೆ ನೀರು ಹರಿಸಲಾಗುವುದು.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆ: ಜು.22 ರಿಂದ ಸರಾಸರಿ 1300 ಕ್ಯೂಸೆಕ್ಸ್‍ನಂತೆ ನೀರು ಹರಿಸಲಾಗುವುದು.

ರಾಯಬಸವಣ್ಣ ಕಾಲುವೆ: ಈಗಾಗಲೇ ಜು.01 ರಿಂದ 180 ಕ್ಯೂಸೆಕ್ಸ್‍ನಂತೆ ಹರಿಬಿಡಲಾಗುತ್ತಿದೆ.

ನದಿ ಪೂರಕ: ಸುಮಾರು 1000 ಕ್ಯೂಸೆಕ್ಸ್ ಮತ್ತು ಕಾರ್ಖಾನೆಗಳಿಗೆ 60 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು.

*ರೈತ ಭಾಂದವರಲ್ಲಿ ಮನವಿ:*

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ.

ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಅವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕøತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

--------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ