Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋ ನಿರ್ಮಿಸಲು ಸಿದ್ದರಾಗಿದ್ದೇವೆ: ಮೊಹಬೂಬ್ ಭಾಷಾ


ಶಿವಮೊಗ್ಗ,ನವೆಂಬರ್.23 ಶಿವಮೊಗ್ಗ ಸಿನಿಮಾ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡುತ್ತಿದ್ದು, ಈ ಉದ್ದೇಶದಿಂದ ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋವನ್ನು ನಿರ್ಮಾಣ ಮಾಡಲು ನಿಗಮದಿಂದ ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕಂಠೀರವ ಸ್ಟುಡಿಯೋ ನಿಗಮದ ಅಧ್ಯಕ್ಷರಾದ ಮೊಹಬೂಬ್ ಭಾಷಾ ತಿಳಿಸಿದರು.

ಭಾನುವಾರ ನಗರದ ಪ್ರತಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,

ಕಂಠೀರವ ಸ್ಟುಡಿಯೋವನ್ನು ರಾಜ್ಯ ಮಟ್ಟದಲ್ಲಿ ವಿಸ್ತರಣೆ ಮಾಡುವ ಉದ್ದೇಶವನ್ನು ನಿಗಮ ಹೊಂದಿದ್ದು, ಇದಕ್ಕಾಗಿ ಜಿಲ್ಲಾವಾರುಗಳಲ್ಲಿ ಬಹಳಷ್ಟು ಬೇಡಿಕೆಯೂ ಸಹ ಇತ್ತು. ಹಾಗಾಗಿ ಕಂಠೀರವ ಸ್ಟುಡಿಯೋವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ಸಿದ್ದವಾಗಿದ್ದೇವೆ. ಇದಕ್ಕೆ ಸಂಬಂಧಪಟ್ಟಂತೆ ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಯಲ್ಲಿರುವ 25 ಎಕರೆಯ ಅನುಪಯುಕ್ತವಾಗಿರುವ ಭೂಮಿಯನ್ನು ಸ್ಟುಡಿಯೋ ನಿರ್ಮಾಣ ಕೊಡಿ ಎಂದು ಡಿಸಿ ಮನವಿ ಮಾಡಲಾಗಿದೆ ಎಂದರು.

ಶಿವಮೊಗ್ಗ ಕನ್ನಡದಲ್ಲಿ ಶ್ರೀಮಂತ ಜಿಲ್ಲೆ. ಇಲ್ಲಿ ಸಿನಿಮಾ ಕಲಾವಿದರು ತುಂಬಾ ಇದ್ದಾರೆ. ಇವೆಲ್ಲರನ್ನೂ ಜಾಗತೀಕ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ. ಹಾಗೂ ಶಿವಮೊಗ್ಗದಲ್ಲಿ ನಡೆಯುವ ಹೊರಾಂಗಣ ಮತ್ತು ಒಳಾಂಗಣ ಚಿತ್ರೀಕರಣಕ್ಕೆ ಇದು ಬಹಳಷ್ಟು ಅನುಕೂಲವಾಗಲಿದೆ. ಇದರಿಂದ ಭಾಷೆ ಉಳಿಯುತ್ತದೆ ಹಾಗೂ ಪ್ರತಿಭೆಗಳು ಬೆಳೆಯುತ್ತಾರೆ. ಉದ್ಯೋಗವೂ ಕೂಡ ಸೃಷ್ಟಿಯಾಗಲಿದೆ ಎಂದರು.

ಬೆಂಗಳೂರು ಹಾಗೂ ಮೈಸೂರಿನಿಂದ ದೂರವಿರುವ ಮಧ್ಯ ಕರ್ನಾಟಕ ಭಾಗಗಳಾದ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯನಗರ ಜಿಲ್ಲೆಗಳಲ್ಲಿ ಸ್ಟುಡಿಯೋ ನಿರ್ಮಿಸುವ ಯೋಜನೆ ಮಾಡಲಾಗಿದ್ದು, ಈಗಾಗಲೇ ಸರ್ಕಾರ ತನ್ನ ಬಜೆಟ್‌ನಲ್ಲಿ 5 ಕೋಟಿ ಅನುದಾನವನ್ನು ನೀಡಿದೆ. ಇನ್ನೂ ಮೈಸೂರಿನಲ್ಲಿ 160 ಎಕರೆಯಲ್ಲಿ ರಾಮೋಜಿ ಫೀಲ್ಮಿ ಸಿಟಿ ಮಾದರಿಯಂತೆ ಫಿಲ್ಮಿಸಿಟಿ ಯನ್ನು ವಾರ್ತಾ ಇಲಾಖೆಯಿಂದ ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕನ್ನಡದಲ್ಲಿ ಓಟಿಟಿ ಪ್ರಾರಂಭ ಮಾಡಲು ನಿಗಮದಿಂದ ಈಗಾಗಲೇ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಕನ್ನಡದ ಕಿರುತೆರೆ, ಬೆಳ್ಳಿ ಪರದೆಗೆ ಹಾಗೂ ಅವುಗಳ ಕಾರ್ಯಗಳಿಗೆ ಓಟಿಟಿ ನಿರ್ಮಾಣ ಮಾಡಲು ಸರ್ಕಾರ 2025 ರ ಅಯವ್ಯಯದಲ್ಲಿ ಅನುದಾನ ನೀಡಲು ಮುಂದಾಗಿದೆ.

ಕನ್ನಡ ಓಟಿಟಿ ಸರ್ಕಾರದ ಕಾರ್ಯಕ್ರಮವಾಗಿದ್ದು, ಅದಕ್ಕೆಂದು ಸಮಿತಿಯನ್ನು ರಚನೆ ಮಾಡಲಾಗಿದೆ. ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ಎರಡು ಸಭೆಗಳನ್ನು ನಡೆಸಿದ್ದು, ಓಟಿಟಿ ನಿರ್ಮಾಣಕ್ಕೆ ಬೇಕಾದ ಎಲ್ಲಾ ರೂಪರೇಷೆಗಳನ್ನು ತಯಾರಿಸಲಾಗಿದೆ ಎಂದರು.

ಸರ್ಕಾರ ಕನ್ನಡ ಭಾಷೆಯನ್ನು ಬೆಳೆಸಬೇಕು ಹಾಗೂ ಉಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯವನ್ನು ಮಾಡುತ್ತಿದೆ. ಓಟಿಟಿ ಪರಿಣಾಮವಾಗಿ ಕೆಲಸ ಮಾಡಲಿದ್ದು, ಇದರಿಂದ ಜಾಗತೀಕ ಮಟ್ಟದಲ್ಲಿ ಕನ್ನಡಕ್ಕೆ ಸ್ಥಾನಮಾನ ದೊರಕುತ್ತದೆ. ನಮ್ಮ ಮಣ್ಣಿನ ಗ್ರಾಮೀಣ ಶೈಲಿಯ ಬದುಕು ಓಟಿಟಿ ಮೂಲಕ ಇಡೀ ಜಗತ್ತು ನೋಡುವಂತಾಗುತ್ತದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡ ಎನ್.ರಮೇಶ್ ಹಾಜರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು