Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕಲ್ಯಾಣ ಕರ್ನಾಟಕ ಶಿಕ್ಷಣ ಮತ್ತು ಉದ್ಯೋಗ ಸಂವಿಧಾನದ 371 (ಜೆ) ಸಮರ್ಪಕ ಜಾರಿಗೆ ಅಧಿಕಾರಿಗಳು ಬದ್ಧರಾಗಬೇಕು - ಸಚಿವ ಪ್ರಿಯಾಂಕ್ ಖರ್ಗೆ


ಬಳ್ಳಾರಿ,ಮಾ.10



ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಈ ವಿಷಯದಲ್ಲಿ ಅನಾದರ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ವಹಿಸಲಾಗುವುದು. ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖಾ ಮುಖ್ಯಸ್ಥರು ಹಾಗೂ ಕಾರ್ಯದರ್ಶಿಗಳಿಗಿಂತ ಮೇಲ್ಪಟ್ಟ ಜವಾಬ್ದಾರಿಯುತ ಅಧಿಕಾರಿಗಳು ಖುದ್ದಾಗಿ ಹಾಜರಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಸಚಿವ ಸಂಪುಟ ಉಪಸಮಿತಿಯ ವರದಿಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ಧಿಯಲ್ಲಿ ತಾರತಮ್ಯ ಹೋಗಲಾಡಿಸುವ ಮಹತ್ವಾಕಾಂಕ್ಷೆಯೊ0ದಿಗೆ ಸಂವಿಧಾನದ 371 (ಜೆ) ಅನುಚ್ಚೇದಕ್ಕೆ ತಿದ್ದುಪಡಿ ತಂದು ಕಲ್ಪಿಸಲಾಗಿರುವ ಸಂವಿಧಾನಾತ್ಮಕ ಹಕ್ಕು ಮತ್ತು ಸೌಕರ್ಯಗಳ ಜಾರಿಗೆ ಅಧಿಕಾರಿಗಳು ಅನಾಸಕ್ತಿ ತೋರುತ್ತಿರುವುದನ್ನು ಗಮನಿಸಲಾಗುತ್ತಿದೆ. ಅನೇಕ ಬಾರಿ ನೆನಪೋಲೆ, ಸುತ್ತೋಲೆ ಕಳುಹಿಸಿದರೂ ಕೆಲ ಇಲಾಖೆಗಳ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸದೇ ನಿರ್ಲಕ್ಷಿಸುತ್ತಿರುವುದನ್ನು ಸಚಿವ ಸಂಪುಟ ಉಪಸಮಿತಿ ಗಂಭೀರವಾಗಿ ಪರಿಗಣಿಸಿದೆ. ಇನ್ನು ಮುಂದೆ ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ಸಭೆಗಳನ್ನು ಆಯ್ದ ಇಲಾಖೆಗಳೊಂದಿಗೆ ನಡೆಸಲಾಗುವುದು. ಸಭೆಗೆ ಕಡ್ಡಾಯವಾಗಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರ ಹಂತದ ಅಧಿಕಾರಿಗಳು ಭಾಗವಹಿಸಬೇಕು ಎಂದರು.

ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿರುವ ಪೊಲೀಸ್ ಮತ್ತು ಇತರೆ ಇಲಾಖೆಗಳು ಕೂಡಲೇ ನೇಮಕಾತಿ ಆದೇಶಗಳನ್ನು ಅಭ್ಯರ್ಥಿಗಳಿಗೆ ನೀಡಿ ಸೇವೆಗೆ ಹಾಜರುಪಡಿಸಿಕೊಳ್ಳಬೇಕು. ಸ್ಥಳೀಯ ಮತ್ತು ಉಳಿಕೆ ಮಾತೃವೃಂದದ ಸಂಯುಕ್ತ ಜೇಷ್ಠತಾ ಪಟ್ಟಿಯನ್ನು ಎಲ್ಲಾ ಇಲಾಖೆಗಳು ಹೊರಡಿಸಬೇಕು. ಈ ವಿಷಯದಲ್ಲಿ ನ್ಯಾಯಲಯದ ಆದೇಶ ಸ್ಪಷ್ಟವಾಗಿದೆ. ಮಾಸಾಂತ್ಯದೊಳಗೆ ಆದೇಶ ಹೊರಡಿಸಿ ಗೊಂದಲ ನಿವಾರಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದರು.

ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ನೇಮಕಾತಿ ಹಾಗೂ ಮುಂಬಡ್ತಿಗೆ ಸಂಬ0ಧಿಸಿದ0ತೆ 2023 ರ ಸುತ್ತೋಲೆ ಮಾತ್ರ ಜಾರಿಯಲ್ಲಿದೆ. ಅದಕ್ಕೂ ಹಿಂದಿನ ಎಲ್ಲಾ ಹಳೆಯ ಆದೇಶಗಳನ್ನು ಹಿಂಪಡೆಯಲಾಗಿದೆ. ಅನಗತ್ಯವಾಗಿ ಸ್ಪಷ್ಟೀಕರಣ, ಮಾರ್ಗದರ್ಶನ ಕೋರಿ ಪತ್ರ ಬರೆದು ಕಾಲಹರಣ ಮಾಡಬಾರದು ಎಂದು ಹೇಳಿದರು.

ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೊಂದರಲ್ಲಿಯೇ ನೇರ ನೇಮಕಾತಿಗೆ ಸೇರಿದ ಸುಮಾರು 12 ಸಾವಿರ ಹಾಗೂ ಮುಂಬಡ್ತಿಗೆ ಮೀಸಲಿಟ್ಟ ಸುಮಾರು 9 ಸಾವಿರ ಹುದ್ದೆಗಳು ಖಾಲಿ ಇವೆ. ಈಗಾಗಲೇ 5267 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ. ಉಳಿದ 6 ಸಾವಿರ ಹುದ್ದೆಗಳಿಗೂ ನೇರ ನೇಮಕಾತಿ ಮಾಡಿಕೊಳ್ಳಬೇಕು. ಯಾವುದೇ ಇಲಾಖೆಯು ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ನೇಮಕಾತಿಗೆ ಮುನ್ನ ಆರ್ಥಿಕ ಇಲಾಖೆಯ ಸಹಮತಿ ಪಡೆಯುವ ಅಗತ್ಯವಿಲ್ಲ. ಇದಕ್ಕೆ ಸಂಬ0ಧಿಸಿದತೆ ಸರ್ಕಾರದ ಆದೇಶವೂ ಕೂಡ ಇದೆ. ಶಿಕ್ಷಣ, ಆರೋಗ್ಯ, ಪೊಲೀಸ್, ಸಾರಿಗೆ, ಇಂಧನ ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಖಾಲಿ ಹುದ್ದೆಗಳನ್ನು ಹೊಂದಿರುವ ಇಲಾಖೆಗಳು ನೇಮಕಾತಿಗೆ ತ್ವರಿತ ಕ್ರಮ ವಹಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿ, ಮುಂಬಡ್ತಿಗೆ ಸಂಬಧಿಸಿದ ನ್ಯಾಯಾಲಯ ಪ್ರಕರಣಗಳು ತ್ವರಿತ ವಿಲೇವಾರಿಗೆ ಕಾನೂನು ಸಚಿವರು ಹಾಗೂ ಅಡ್ವೋಕೇಟ್ ಜನರಲ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಸರ್ಕಾರವು ಕಲ್ಯಾಣ ಕರ್ನಾಟಕ ಭಾಗಕ್ಕೆ ಹೊಸ ಇಂಜಿನಿಯರಿAಗ್ ಕಾಲೇಜುಗಳು, ವಸತಿ ಶಾಲೆ, ಹಾಸ್ಟೆಲ್‌ಗಳನ್ನು ಮಂಜೂರು ಮಾಡಿದೆ. ಅದಕ್ಕನುಗುಣವಾಗಿ ಹುದ್ದೆಗಳನ್ನು ಸೃಜಿಸಿ ನೇಮಕಾತಿಗೆ ಕ್ರಮವಹಿಸಬೇಕು. ಕಾಲಮಿತಿಯೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಗತ್ಯವಿರುವ ಎಲ್ಲಾ ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗೆ ಕ್ರಮವಹಿಸಬೇಕು. 371 (ಜೆ) ಅಡಿ ಹೊರಡಿಸಿರುವ ಆದೇಶಗಳ ಜಾರಿ ಮತ್ತು ಸಚಿವ ಸಂಪುಟ ಉಪಸಮಿತಿ ಸಭೆಗೆ ಗೈರು ಹಾಜರಾಗುವ ಇಲಾಖೆಗಳ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.

ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಸೇರಿದಂತೆ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು, ಸರ್ಕಾರದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ