Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ನಕಲಿ ಜಾತಿ ಪ್ರಮಾಣ ಪತ್ರ ನ್ಯಾಯಾಲಯದ ಆದೇಶವೇನು

 

ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಿಗಳ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕುಗಳು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಷ್ಟೇ ಅಲ್ಲದೇ ಅದೇ ಆಧಾರದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ರದ್ದುಪಡಿಸಿದೆ.

ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಏಕಸದಸ್ಯಪೀಠ ಶಿಪ್ಪಿಂಗ್ ಸಚಿವಾಲಯದಲ್ಲಿ ಸಹಾಯಕ ಲೈಟ್ ಕೀಪರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎ. ಎಸ್. ಪಳನಿ ಎಂಬುವರ ಅರ್ಜಿ ಮಾನ್ಯ ಮಾಡಿದೆ. ಅವರ ವಿರುದ್ಧದ ಪ್ರಕರಣ ಮತ್ತು ಆರೋಪ ಪಟ್ಟಿ ರದ್ದುಪಡಿಸಿದೆ.

ನ್ಯಾಯಾಲಯದ ಆದೇಶವೇನು?: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ಮೀಸಲಾತಿ ಮತ್ತು ನೇಮಕಾತಿ ಇತರೆ) ಕಾಯಿದೆ 1990ರ ಅಡಿಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣ ಪತ್ರ ನೀಡುವವರಿಗೆ ಶಿಕ್ಷೆ ವಿಧಿಸುವ ಸಂಬಂಧ ವಿವರಿಸಲಿದೆ.

ಅದರಂತೆ ತಪ್ಪು ಮಾಹಿತಿ ನೀಡಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರು ತಿಂಗಳಿಂದ ಎರಡು ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಿಕಾಶವಿರಲಿದೆ. ಆದರೆ, ಇದೇ ಕಾಯಿದೆಯ ಸೆಕ್ಷನ್ 5ಎ ಪ್ರಕಾರ ಸೆಕ್ಷನ್ 6ರಲ್ಲಿ ತಿಳಿಸಿರುವಂತೆ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾದರೆ ರಾಜ್ಯ ಸರ್ಕಾರದಿಂದ ಪೂರ್ವನುಮತಿ ಪಡೆಯಬೇಕಾಗಿದೆ. ಆದರೆ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ಮೀಸಲಾತಿ ಮತ್ತು ನೇಮಕಾತಿ ಇತರೆ) ನಿಯಮ 1992ರ ನಿಯಮ 7ರ ಪ್ರಕಾರ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಈ ಪ್ರಕರಣದಲ್ಲಿ ಅಕ್ರಮವಾಗಿ ಜಾತಿ ಪ್ರಮಾಣ ಪತ್ರ ಪಡೆದಿರುವ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಶಿಫಾರಸು ಮಾಡಿದ್ದಾರೆ. ಆದರೆ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಂಬಂಧ ಯಾವುದೇ ಶಿಫಾರಸ್ಸು ಮಾಡಿಲ್ಲ. ಆದ್ದರಿಂದ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಫ್‌ಐಆರ್ ಮತ್ತು ಅದರ ಆಧಾರದಲ್ಲಿ ದಾಖಲಿಸಿರುವ ಆರೋಪ ಪಟ್ಟಿ ಅಮಾನ್ಯಗೊಳ್ಳಲಿದೆ ಎಂದು ನ್ಯಾಯಪೀಠ ತಿಳಿಸಿದೆ. ಅಲ್ಲದೆ, ಅರ್ಜಿದಾರರ ಜಾತಿ ಪ್ರಮಾಣ ಪತ್ರ ರದ್ದುಪಡಿಸಿರುವ ಕ್ರಮವನ್ನು ಪ್ರಶ್ನಿಸಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಸಲ್ಲಿಸಿರುವ ಅರ್ಜಿ ವಿಚಾರಣಾ ಹಂತದಲ್ಲಿರುವಾಗಲೇ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ಎಫ್‌ಐಆರ್ ಅಧಿಕಾರವನ್ನು ಮೀರಿ ಎಫ್‌ಐಆರ್ ದಾಖಲಿಸಿದೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೆ ಅಗತ್ಯವಿರುವ ಅಂಶಗಳು ಸ್ಪಷ್ಟವಾಗಿಲ್ಲ. ಆದ್ದರಿಂದ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆ ಮುಂದುವರೆಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಲಿದೆ ಎಂದು ಪೀಠ ತಿಳಿಸಿ ಅರ್ಜಿಯನ್ನು ಪುರಸ್ಕರಿಸಿದ್ದು, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ. ಪ್ರಕರಣವೇನು?: ಅರ್ಜಿದಾರರಾದ ಪಳನಿ ಅವರು ಮೊದಲಿಯಾರ್ ಸಮುದಾಯಕ್ಕೆ ಸೇರಿದ್ದು, ಸರ್ಕಾರದ ಪ್ರಾಧಿಕಾರಗಳಿಗೆ ತಪ್ಪು ಮಾಹಿತಿ ನೀಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದರು. ಇದೇ ಪ್ರಮಾಣ ಪತ್ರವನ್ನು ನೀಡಿ ಶಿಪ್ಪಿಂಗ್ ಮತ್ತು ಸಾರಿಗೆ ಸಚಿವಾಲಯದಲ್ಲಿ ಲೈಟ್ ಕೀಪರ್ ಆಗಿ ಸೇವೆಗೆ ಸೇರಿಕೊಂಡಿದ್ದರು. ಈ ಜಾತಿ ಪ್ರಮಾಣ ಪತ್ರವನ್ನು ತಹಶೀಲ್ದಾರ್ ರದ್ದುಪಡಿಸಿದ್ದರು. ಇದನ್ನು ಪ್ರಶ್ನಿಸಿ ಪಳನಿ ಮೇಲ್ಮವಿ ಪ್ರಾಧಕಾರದ ಮುಂದೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣಾ ಹಂತದಲ್ಲಿರುವಾಗಲೇ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ಅರ್ಜಿದಾರರ ವಿರುದ್ಧ ಕೆ. ಆರ್. ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನಿಖೆ ನಡೆಸಿದ್ದ ಪೊಲೀಸರು ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ