Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಮ್ಹಾನ್ಸ್‍ನಲ್ಲಿ ಜರುಗಿದ ವಿಶ್ವ ಮೆದುಳು ದಿನ ಕಾರ್ಯಕ್ರಮ*

*ಧಾರವಾಡ ಜು.23* ಮೆದುಳು ನಮ್ಮ ದೇಹದ ಪ್ರಮುಖ ಅಂಗವಾಗಿದೆ ಇದು ನಮ್ಮ ಆಲೋಚನೆ, ಚಲನೆ, ಭಾವನೆಗಳು ಮತ್ತು ಇಡೀ ದೇಹದ ಕಾರ್ಯ ವೈಖರಿಯನ್ನು ನಿಯಂತ್ರಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಪರಶುರಾಮ ಎಫ್.ಕೆ. ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಮಾನಸಿಕ ಹಾಗೂ ನರ ವಿಜ್ಞಾನಗಳ ಸಂಸ್ಥೆ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗ, ಧಾರವಾಡ, ಜಿಲ್ಲಾ ಐ.ಇ.ಸಿ. ವಿಭಾಗ, ಜಿಲ್ಲಾ ತಾಲ್ಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ, ಧಾರವಾಡ ಇವರ ಸಹಯೋಗದೊಂದಿಗೆ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ಆವರಣದಲ್ಲಿರುವ ಸಭಾಂಗಣದಲ್ಲಿ ವಿಶ್ವ ಮೆದುಳು ದಿನದ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದರು.
ಮೆದುಳಿನ ಆರೋಗ್ಯವು ಪ್ರತಿಯೊಬ್ಬರ ಹಕ್ಕು, ನಗರ ಅಥವಾ ಗ್ರಾಮ ಶ್ರೀಮಂತ ಅಥವಾ ಬಡವ ಎಂಬ ಭೇದವಿಲ್ಲದೆ ಎಲ್ಲರಿಗೂ ಗುಣಮಟ್ಟದ ನರರೋಗ ತಪಾಸಣೆ, ಸಮಯೋಜಿತ ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳು ಎಲ್ಲರಿಗೂ ಲಭ್ಯವಾಗಬೇಕು, ಪಾಶ್ರ್ವವಾಯು, ಅಪಸ್ಮಾರ, ಡಿಮೆನ್ಸಿಯಾ, ಪಾರ್ಕಿನ್ಸನ್, ಮೈಗ್ರೇನ ಮತ್ತು ಇತರ ನರ ರೋಗಗಳನ್ನು ಬೇಗ ಗುರ್ತಿಸಿ ಚಿಕಿತ್ಸೆ ನೀಡುವುದು ಅತ್ಯಂತ ಮುಖ್ಯ.
ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ, ರಕ್ತದೊತ್ತಡ ಮತ್ತು ಮಧುಮೇಹ ನಿಯಂತ್ರಣ ಧೂಮಪಾನ ಮತ್ತು ಮಧ್ಯಪಾನದಿಂದ ದೂರವಿರುವುದು ಮೆದುಳಿನ ಆರೋಗ್ಯ ಕಾಪಾಡಲು ಸಹಕಾರಿ ಎಂದರು.
ಮೆದುಳಿನ ಕಾಯಿಲೆಗಳ ಬಗ್ಗೆ ತಪ್ಪು ಕಲ್ಪನೆ ಮತ್ತು ತಾರತಮ್ಯವನ್ನು ನಿವಾರಿಸಿ ಎಲ್ಲರಿಗೂ ಸಮಾನ ಆರೋಗ್ಯ ಸೇವೆ ಒದಗಿಸಬೇಕು. ಜಾಗೃತಿ, ಶಿಕ್ಷಣ, ಸಂಶೋಧನೆ ಮತ್ತು ಆರೋಗ್ಯ ಸೇವೆಗಳ ಲಭ್ಯತೆ ಹೆಚ್ಚಿಸುವ ಮೂಲಕ ಕಾಯಿಲೆಗಳ ಭಾರವನ್ನು ಕಡಿಮೆ ಮಾಡಬಹುದೆಂದು ತಿಳಿಸಿದರು.
ಡಿಮ್ಹಾನ್ಸ್ ಸಂಸ್ಥೆಯ ಮೆಡಿಕಲ್ ಸುಪ್ರಿಡೆಂಟ್ ಡಾ. ರಾಘವೇಂದ್ರ ನಾಯಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿಶ್ವ ಮೆದುಳು ದಿನವನ್ನು ಜುಲೈ-22 ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಮೆದುಳಿನ ಆರೋಗ್ಯದ ಮಹತ್ವ, ನರ ಸಂಬಂಧಿ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆರಂಭಿಕ ಚಿಕಿತ್ಸೆಯ ಪ್ರಯೋಜನಗಳ ಬಗ್ಗೆ ತಿಳಿಸಿದರು.
ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ ಅವರು ಮಾತನಾಡಿ, ಆರೋಗ್ಯಕರ ಮೆದುಳು ಎಂದರೆ ಆರೋಗ್ಯಕರ ಜೀವನ, ಮೆದುಳಿನ ಆರೋಗ್ಯವನ್ನು ಕಾಪಾಡುವುದು. ವ್ಯಕ್ತಿ, ಕುಟುಂಬ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ಎಲ್ಲರಿಗೂ ಮೆದುಳಿನ ಆರೋಗ್ಯ ಸೇವೆಗಳು ಲಬ್ಯವಾಗುವಂತೆ ನಾವು ಒಟ್ಟಾಗಿ ಕಾರ್ಯ ನಿರ್ವಹಿಸೋಣ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಶಶಿಧರ ಕಳಸೂರಮಠ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಮಹೇಶ ಎನ್. ಚಿತ್ತರಗಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಮಂಜುನಾಥ ಎಸ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ರವೀಂದ್ರ ಬೊವೇರ, ಜನರಲ್ ಪಿಜಿಶೀಯನ್/ ಇನಚಾರ್ಜ ಕರ್ನಾಟಕ ಮೆದುಳು ಆರೋಗ್ಯ ವಿಭಾಗದ ಡಾ. ಕಿರಣ ಕುಲಕರ್ಣಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ. ಗೌರಿ ಬೆಲ್ಲದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಧಾ ತಿವಾರಿ, ಇಲಾಖೆಯ ಎಲ್ಲ ಸಮುದಾಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.
ಡಿಮ್ಹಾನ್ಸ್ ಸಹಾಯಕ ಪ್ರಾಧ್ಯಾಪಕ ಡಾ. ಮೇಘಮಾಲಾ ತಾವರಗೇರಿ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಮ್.ಎನ್ ಅಗಡಿ ಸ್ವಾಗತಿಸಿ, ನಿರೂಪಿಸಿದರು. ಅಂಜುಮ್ ನದಾಫ್ ವಂದಿಸಿದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ