Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪರಿಚಯ ಕಾರ್ಯಕ್ರಮ



ಕೊಪ್ಪಳ ಫೆಬ್ರವರಿ 12ಕೊಪ್ಪಳದ ಗಣೇಶ ನಗರದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ಕುರಿತು ಗ್ರಂಥಾಲಯದಲ್ಲಿನ ಓದುಗರಿಗೆ ಪರಿಚಯ ಮಾಡುವ ಕಾರ್ಯಕ್ರಮ ಜರುಗಿತು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನೋಡಲ್ ಅಧಿಕಾರಿ ಶಿವಯೋಗಿ ಹೊಸಹಳ್ಳಿ ಅವರು ವಿದ್ಯಾರ್ಥಿ ಓದುಗರಿಗೆ ಯುವನಿಧಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ, ಯೋಜನೆಯ ಫಲಾನುಭವಿಗಳಾಗಬೇಕಾದರೆ ಇರುವ ಅರ್ಹತೆಗಳ ಕುರಿತು ಯುವನಿಧಿ ಯೋಜನೆಯ ಕುರಿತು ಒಟ್ಟಾರೆಯಾಗಿ ಪರಿಚಯಿಸಿದರು. ಪರಿಚಯ ಮಾಡಿಕೊಟ್ಟ ನಂತರ ಓದುಗರು ಯುವನಿಧಿ ಕುರಿತು ಪ್ರಶ್ನೆಗಳನ್ನು ಕೇಳಿದರು. ಆ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಲಾಯಿತು.

2023, 2024 ಹಾಗೂ 2025 ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್‌ನಲ್ಲಿ https://sevasindhugs.karnataka.gov.in ಗೆ ಭೇಟಿ ನೀಡಬೇಕು. ಸಹಾಯವಾಣಿ 18005997154 ಸಂಪರ್ಕಿಸಲು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ಉಪಸ್ಥಿತರಿದ್ದರು. ಗ್ರಂಥಾಲಯ ಸಹಾಯಕ ನಾಗರಾಜ ನಾಯಕ ಡಿ.ಡೊಳ್ಳಿನ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗ್ರಂಥಾಲಯ ಸಹಾಯಕಿ ವಿಜಯಲಕ್ಷ್ಮೀ ವಡ್ಡಟ್ಟಿ ಸ್ವಾಗತಿಸಿ, ವಂದಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ